ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 3ನೇ ಸುತ್ತಿನ ಎರಡನೇ ಹಂತದ ಕಂದು ರೋಗ ಲಸಿಕಾ ಕಾರ್ಯಕ್ರಮ ಜನವರಿ 10 ರಿಂದ 25 ರವರೆಗೆ ದಕ ಜಿಲ್ಲೆಯಾದ್ಯಂತ ದನ ಮತ್ತು ಎಮ್ಮೆಗಳ ಹೆಣ್ಣು ಕರುಗಳಿಗೆ ಮಾತ್ರ ಉಚಿತವಾಗಿ ಹಮ್ಮಿಕೊಳ್ಳಲಾಗಿದೆ.
ಲಸಿಕೆಯನ್ನು ಕರುಗಳಿಗೆ ಜೀವಿತಾವಧಿಯಲ್ಲಿ ಒಮ್ಮೆ ಮಾತ್ರ ನೀಡಬೇಕು. ಕಂದು ರೋಗವು ಬ್ಯಾಕ್ಟೀರಿಯಾದಿಂದ ಹರಡುವ ರೋಗವಾಗಿದ್ದು ಜಾನುವಾರುಗಳಲ್ಲಿ ಜ್ವರ, ಗರ್ಭಪಾತ, ಗರ್ಭಧಾರಣೆ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಇದು ಪ್ರಾಣಿಜನ್ಯ ರೋಗವಾಗಿದ್ದು ಮನುಷ್ಯರಿಗೂ ಹರಡಬಹುದಾಗಿದೆ ಇದರ ಚಿಕಿತ್ಸೆ ದುಬಾರಿ ಮತ್ತು ತ್ರಾಸದಾಯಕವಾಗಿದ್ದು, ಒಟ್ಟಾರೆ ರೈತರಿಗೆ ತುಂಬಾ ಆರ್ಥಿಕ ನಷ್ಟ ಉಂಟು ಮಾಡುತ್ತದೆ. ರೈತ ಬಾಂಧವರು ತಮ್ಮ 4 ರಿಂದ 8 ತಿಂಗಳ ವಯಸ್ಸಿನ ಹೆಣ್ಣು ಕರುಗಳಿಗೆ ತಪ್ಪದೇ ಲಸಿಕೆ ಹಾಕಿಸಬೇಕು. ಲಸಿಕೆ ಹಾಕಿಸುವುದೊಂದೇ ಕಂದು ರೋಗ ನಿಯಂತ್ರಿಸಲು ಇರುವ ಏಕೈಕ ಮಾರ್ಗವಾಗಿದೆ.
ಹೆಚ್ಚಿನ ಮಾಹಿತಿಗೆ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳನ್ನು ಸಂಪರ್ಕಿಸಿ ಎಂದು ಮಂಗಳೂರು ಪಶುಪಾಲನಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…