ಹವಾಮಾನ ವರದಿ | 05-07-2024 | ಕರಾವಳಿಯಲ್ಲಿ ಮಧ್ಯಾಹ್ನ ನಂತರ ಮಳೆ ಸಾಧ್ಯತೆ | ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ |ಜು.10 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

July 5, 2024
11:32 AM
ಜುಲೈ 10ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿದ್ದು, ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

06.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಉತ್ತಮ ಮಳೆಯ ಮುನ್ಸೂಚನೆ ಇದೆ. ಅಲ್ಲಲ್ಲಿ ಗುಡುಗು ಇರಬಹುದು.

ಕೊಡಗು ಹಾಗೂ ಹಾಸನ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ದ್ರುವ ಭಾಗದಿಂದ ಬರುತ್ತಿರುವ ಮಾರುತಗಳು ದುರ್ಬಲಗೊಳ್ಳುತ್ತಿದ್ದು, ಮುಂದಿನ 3 ಅಥವಾ 4 ದಿನಗಳಲ್ಲಿ ಸಾಂಪ್ರದಾಯಿಕ ಮುಂಗಾರು ಮಾರುತಗಳು ಬಲಗೊಳ್ಳುವ ಲಕ್ಷಣಗಳಿವೆ. ಈಗಿನಂತೆ ಜುಲೈ 10ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿದ್ದು, ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror