06.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಉತ್ತಮ ಮಳೆಯ ಮುನ್ಸೂಚನೆ ಇದೆ. ಅಲ್ಲಲ್ಲಿ ಗುಡುಗು ಇರಬಹುದು.
ಕೊಡಗು ಹಾಗೂ ಹಾಸನ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ದ್ರುವ ಭಾಗದಿಂದ ಬರುತ್ತಿರುವ ಮಾರುತಗಳು ದುರ್ಬಲಗೊಳ್ಳುತ್ತಿದ್ದು, ಮುಂದಿನ 3 ಅಥವಾ 4 ದಿನಗಳಲ್ಲಿ ಸಾಂಪ್ರದಾಯಿಕ ಮುಂಗಾರು ಮಾರುತಗಳು ಬಲಗೊಳ್ಳುವ ಲಕ್ಷಣಗಳಿವೆ. ಈಗಿನಂತೆ ಜುಲೈ 10ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿದ್ದು, ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…