#WeatherMirror| ಜುಲೈ 23ರಿಂದ ರಾಜ್ಯದಾದ್ಯಂತ ಮುಂಗಾರು ತನ್ನ ಪ್ರಭಾವ ಬೀರುವ ಲಕ್ಷಣ : ಉತ್ತಮ ಮಳೆಯ ನಿರೀಕ್ಷೆ

July 19, 2023
10:28 AM
ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗಾಳಿ ಸಹಿತ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ, ಕರ್ನಾಟಕದ ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗಾಳಿ ಸಹಿತ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ.ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಹೆಚ್ಚಿರುವ ಸಾಧ್ಯತೆ ಇದೆ.

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಾಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಎರಡು ದಿನಗಳಿಂದ ಧಾರವಾಡ, ಬೆಳಗಾವಿಯಲ್ಲಿ ಬಿಡದೆ ಸಾಧಾರಣ ಮಳೆ ಸುರಿಯುತ್ತಿದೆ.

ಮೈಸೂರು, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಹಾಸನ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು ಚುರುಕಾಗಿದ್ದು, ಕರಾವಳಿಯಲ್ಲಿ ಗಾಳಿಯ ಪ್ರಭಾವದಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುವ ಲಕ್ಷಣಗಳಿಲ್ಲ. ಜುಲೈ 23ರಿಂದ ರಾಜ್ಯದಾದ್ಯಂತ ಮುಂಗಾರು ತನ್ನ ಪ್ರಭಾವ ಬೀರುವ ಲಕ್ಷಣಗಳಿವೆ. ಉತ್ತಮ ಮಳೆಯ ನಿರೀಕ್ಷೆ ಇದೆ.
ಸದ್ಯಕ್ಕೆ  ಯಾವುದೇ ರೀತಿಯ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು
March 30, 2026
7:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror