ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗಾಳಿ ಸಹಿತ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ.ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಹೆಚ್ಚಿರುವ ಸಾಧ್ಯತೆ ಇದೆ.
ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಾಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಎರಡು ದಿನಗಳಿಂದ ಧಾರವಾಡ, ಬೆಳಗಾವಿಯಲ್ಲಿ ಬಿಡದೆ ಸಾಧಾರಣ ಮಳೆ ಸುರಿಯುತ್ತಿದೆ.
ಮೈಸೂರು, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಹಾಸನ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ಚುರುಕಾಗಿದ್ದು, ಕರಾವಳಿಯಲ್ಲಿ ಗಾಳಿಯ ಪ್ರಭಾವದಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುವ ಲಕ್ಷಣಗಳಿಲ್ಲ. ಜುಲೈ 23ರಿಂದ ರಾಜ್ಯದಾದ್ಯಂತ ಮುಂಗಾರು ತನ್ನ ಪ್ರಭಾವ ಬೀರುವ ಲಕ್ಷಣಗಳಿವೆ. ಉತ್ತಮ ಮಳೆಯ ನಿರೀಕ್ಷೆ ಇದೆ.
ಸದ್ಯಕ್ಕೆ ಯಾವುದೇ ರೀತಿಯ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿಲ್ಲ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಪುತ್ತೂರು ಶ್ರೀ ಮಹತೋಭಾರ ಶ್ರೀ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…
ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್ ಫ್ರುಟ್(ಕಮಲಂ) ಹಾಗೂ…