Karnataka Weather | 19-06-2024 | ಕೆಲವು ಕಡೆ ಗುಡುಗು ಸಹಿತ ಮಳೆ | ಕೆಲವು ಕಡೆ ತುಂತುರು ಮಳೆ | ಮುಂಗಾರು ಚುರುಕಾಗಿ ಮತ್ತೆ ದುರ್ಬಲ ಸಾಧ್ಯತೆ |

June 19, 2024
11:57 AM
ಜೂನ್ 21ರಿಂದ ಮುಂಗಾರು ಚುರುಕಾಗೊಳ್ಳುವ ಲಕ್ಷಣಗಳಿದ್ದು, ಜೂನ್ 22ರಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ಹೆಚ್ಚಿನ ಕಡೆ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಜೂನ್ 28 ಅಥವಾ ಅಥವಾ 29ರಿಂದ ಮತ್ತೆ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ.

20.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳ ತೀರ ಭಾಗಗಳ ತಾಲೂಕುಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ.
ಮಧ್ಯಾಹ್ನ ನಂತರ, ಸಂಜೆ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. (ನಕ್ಷೆಯಲ್ಲಿ ಈ ಮುನ್ಸೂಚನೆ ಇಲ್ಲ. ಆದರೆ ತೀರ ಭಾಗಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗುತ್ತಿಲ್ಲವಾದ್ದರಿಂದ ಮೋಡಗಳು ಘಟ್ಟದ ಕಡೆಗೆ ಚಲಿಸುತ್ತಿವೆ. ಜೊತೆಗೆ ಸ್ಥಳೀಯ ಮೋಡಗಳೂ ಸೇರಿಕೊಳ್ಳುವುದರಿಂದ ಗುಡುಗು ಉಂಟಾಗುತ್ತಿದೆ.)

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಜೂನ್ 21ರಿಂದ ಮುಂಗಾರು ಚುರುಕಾಗೊಳ್ಳುವ ಲಕ್ಷಣಗಳಿದ್ದು, ಜೂನ್ 22ರಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ಹೆಚ್ಚಿನ ಕಡೆ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಜೂನ್ 28 ಅಥವಾ ಅಥವಾ 29ರಿಂದ ಮತ್ತೆ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್
ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್
ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ
March 3, 2026
9:28 PM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ
March 3, 2026
2:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror