20.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳ ತೀರ ಭಾಗಗಳ ತಾಲೂಕುಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ.
ಮಧ್ಯಾಹ್ನ ನಂತರ, ಸಂಜೆ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. (ನಕ್ಷೆಯಲ್ಲಿ ಈ ಮುನ್ಸೂಚನೆ ಇಲ್ಲ. ಆದರೆ ತೀರ ಭಾಗಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗುತ್ತಿಲ್ಲವಾದ್ದರಿಂದ ಮೋಡಗಳು ಘಟ್ಟದ ಕಡೆಗೆ ಚಲಿಸುತ್ತಿವೆ. ಜೊತೆಗೆ ಸ್ಥಳೀಯ ಮೋಡಗಳೂ ಸೇರಿಕೊಳ್ಳುವುದರಿಂದ ಗುಡುಗು ಉಂಟಾಗುತ್ತಿದೆ.)
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 21ರಿಂದ ಮುಂಗಾರು ಚುರುಕಾಗೊಳ್ಳುವ ಲಕ್ಷಣಗಳಿದ್ದು, ಜೂನ್ 22ರಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ಹೆಚ್ಚಿನ ಕಡೆ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಜೂನ್ 28 ಅಥವಾ ಅಥವಾ 29ರಿಂದ ಮತ್ತೆ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ.
ಅಡಿಕೆಗೆ ಸಂಬಂಧಿಸಿ ಸುಮಾರು 7 ಸಮಿತಿಗಳು-ವರದಿಗಳು ಆಗಿವೆ. ಎಲ್ಲಾ ಸಂದರ್ಭದಲ್ಲೂ ಅಡಿಕೆಯ ಪರ್ಯಾಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…
ʼಕಾಯಕ ಗ್ರಾಮʼ ಯೋಜನೆಯಡಿ ಹಿಂದುಳಿ ದಿರುವ ಗ್ರಾಮ ಪಂಚಾಯತಿಯನ್ನು ದತ್ತು ಸ್ವೀಕಾರ ಮಾಡಬೇಕೆಂದು…
ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು…