22.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :…..ಮುಂದೆ ಓದಿ….
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 22ರಿಂದ ಮಳೆ ಸ್ವಲ್ಪ ಜಾಸ್ತಿ ಆಗುವ ಲಕ್ಷಣಗಳಿದ್ದು ಮುಂದಿನ 5 ಅಥವಾ 6 ದಿನಗಳವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ಮಲೆನಾಡು : ಕೊಡಗು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಇರಬಹುದು. ಹಾಸನ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಉಳಿದ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ 22ರಿಂದ ಮಳೆ ಜಾಸ್ತಿಯಾಗುವ ಲಕ್ಷಣಗಳಿದ್ದು, ಮುಂದಿನ 4 ಅಥವಾ 5 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ. ಈಗಿನಂತೆ ಸೆಪ್ಟೆಂಬರ್ 22ರಿಂದ 25ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಆನೇಕಲ್ ತಾಲೂಕಿನ ಜಿಗಣಿಯ ಕುಂಟ್ಲರೆಡ್ಡಿ ಬಡಾವಣೆಯ ವೇಂಕಟೇಶ್ ಎಂಬುವರ ಮನೆಗೆ ನಿನ್ನೆ ನುಗ್ಗಿದ್ದ…
ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ದೇಶಾದ್ಯಂತ 1 ಸಾವಿರದ 600 ಚಾಲಕ ತರಬೇತಿ ಕೇಂದ್ರಗಳನ್ನು…
ಇಂದು ಕೆಲವು ಕಡೆ ಗುಡುಗು ಸಹಿತ ಮಳೆಯ ಲಕ್ಷಣವಿದೆ. ರಾಜ್ಯದಲ್ಲಿ ಮಳೆಯ ಪ್ರಮಾಣ…
ಕೃಷಿಕ ಯಶಸ್ವಿಯಾಗಬೇಕಾದರೆ , ಕೃಷಿ ಬೆಳೆಯಬೇಕಾದರೆ,ಉಳಿಯಬೇಕಾದರೆ ತಿಂಗಳಿಗೆ ಒಂದಷ್ಟು ಆದಾಯ ಸಿಗಲೇಬೇಕು. ಮುಖ್ಯ…
ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿವೇಳೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಬಾರದೆಂದು ಸಂಸತ್ ಸದಸ್ಯ ತೇಜಸ್ವಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490