Advertisement
MIRROR FOCUS

ರಾಷ್ಟ್ರ ಮಟ್ಟದಲ್ಲಿ ರೈತರಿಗೆ ಫ್ರೂಟ್ಸ್ ಐಡಿ | ಸರ್ಕಾರಿ ಸೌಲಭ್ಯ ಪಡೆಯಲು ಹೊಸ ವ್ಯವಸ್ಥೆ

Share

ಸರ್ಕಾರಿ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ನೇರವಾಗಿ ತಲುಪುವಂತೆ ಮಾಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತರ ನೋಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ – ಫ್ರೂಟ್ಸ್ ಐಡಿ (FRUITS ID)ಯನ್ನು ರಾಷ್ಟ್ರ ಮಟ್ಟದಲ್ಲಿ ಅಳವಡಿಸಿಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ.

ರಾಜ್ಯದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿರುವ ಈ ಯೋಜನೆಯನ್ನು ಕೇಂದ್ರ ಸರ್ಕಾರ ಸ್ವೀಕರಿಸಿದಲ್ಲಿ, ದೇಶದ ಪ್ರತಿಯೊಬ್ಬ ರೈತರಿಗೆ ಒಂದೇ ಒಂದು ವಿಶಿಷ್ಟ ಗುರುತಿನ ಸಂಖ್ಯೆ ಲಭ್ಯವಾಗಲಿದೆ. ಇದರಿಂದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಸೇರಿದಂತೆ ರೈತರಿಗೆ ನೀಡುವ ವಿವಿಧ ಸರ್ಕಾರಿ ಯೋಜನೆಗಳ ಸೌಲಭ್ಯಗಳನ್ನು ನಿಖರವಾಗಿ ತಲುಪಿಸಲು ಸಾಧ್ಯವಾಗಲಿದೆ.

ಫ್ರೂಟ್ಸ್ ಐಡಿ ಮೂಲಕ ಬೀಜ, ಗೊಬ್ಬರ, ತಾಂತ್ರಿಕ ಸಾಧನಗಳ ವಿತರಣೆ, ಬೆಳೆ ವಿಮೆ, ಬೆಳೆ ಪರಿಹಾರ, ಬ್ಯಾಂಕ್ ಸಾಲ ಸೌಲಭ್ಯಗಳಲ್ಲಿನ ದಾಖಲೆಗಳ ನಿರ್ವಹಣೆ ಸುಲಭವಾಗಲಿದ್ದು, ಒಂದೇ ವ್ಯಕ್ತಿ ಹಲವು ಸೌಲಭ್ಯಗಳನ್ನು ಪಡೆದುಕೊಳ್ಳುವಂತಹ ಅಕ್ರಮಗಳನ್ನು ತಡೆಯಲು ಇದು ಸಹಕಾರಿಯಾಗಲಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿಯೂ ಫ್ರೂಟ್ಸ್ ಐಡಿ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ರೈತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಕುರಿತು ಮಾತನಾಡಿದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಮದ್ ಪಟೇಲ್, ಕರ್ನಾಟಕ ಸರ್ಕಾರದ ಮಾದರಿಯಲ್ಲಿ ಕೇಂದ್ರ ಸರ್ಕಾರ ರೈತರಿಗಾಗಿ ರಾಷ್ಟ್ರೀಯ ಮಟ್ಟದ ಗುರುತಿನ ಸಂಖ್ಯೆಯನ್ನು ರೂಪಿಸುತ್ತಿದೆ. ಇದರಿಂದ ಸರ್ಕಾರಿ ಯೋಜನೆಗಳನ್ನು ನೇರವಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.

ಯಡ್ರಾಮಿ ತಾಲೂಕಿನ ಚಿಕ್ಕ ಹಂಗರಗಿ ಗ್ರಾಮದ ರೈತ ಸಾಹೇಬ ಗೌಡ ದೇಸಾಯಿ ಮಾತನಾಡಿ, ಈ ಹಿಂದೆ ರೈತರಿಗೆ ಸಮಗ್ರ ಗುರುತಿನ ವ್ಯವಸ್ಥೆ ಇಲ್ಲದ ಕಾರಣ, ಒಬ್ಬರ ಹೆಸರಿನಲ್ಲಿ ಹಲವರು ಸೌಲಭ್ಯ ಪಡೆದು ವಂಚನೆ ಮಾಡುತ್ತಿದ್ದರು. ಫ್ರೂಟ್ಸ್ ಐಡಿ ಜಾರಿಯಿಂದ ಇಂತಹ ಅಕ್ರಮಗಳಿಗೆ ಕಡಿವಾಣ ಬೀಳಲಿದೆ ಎಂದು ಅಭಿಪ್ರಾಯಪಟ್ಟರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

11 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

11 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

19 hours ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

20 hours ago

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

1 day ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

1 day ago