ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಕೃಷಿ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ರೈತರು ‘ಫ್ರೂಟ್ಸ್’ (FRUITS) ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಜಾವೀದಾ ನಸೀಮಾ ಖಾನಂ ತಿಳಿಸಿದ್ದಾರೆ.
ಬರಪರಿಹಾರ, ಬೆಳೆ ವಿಮೆ ಹಾಗೂ PM-Kisan ಸೇರಿದಂತೆ ಕೃಷಿ, ತೋಟಗಾರಿಕೆ, ರೇಷ್ಮೆ ಮತ್ತು ಪಶುಸಂಗೋಪನೆ ಇಲಾಖೆಗಳ ಎಲ್ಲಾ ಸೌಲಭ್ಯಗಳನ್ನು ಪಡೆಯಲು ಈ ನೋಂದಣಿ ಅತ್ಯಗತ್ಯವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಬರಪರಿಹಾರ, ಬೆಳೆ ವಿಮೆ, ಪಿ.ಎಂ. ಕಿಸಾನ್ (PM-Kisan) ಯೋಜನೆ ಸೇರಿದಂತೆ ಕೃಷಿ, ತೋಟಗಾರಿಕೆ, ರೇಷ್ಮೆ ಮತ್ತು ಪಶುಸಂಗೋಪನೆ ಇಲಾಖೆಗಳ ಸೌಲಭ್ಯಗಳನ್ನು ಪಡೆಯಲು ಈ ನೋಂದಣಿ ಅತ್ಯಗತ್ಯವಾಗಿದೆ. ರೈತರು ತಮ್ಮ ಆಧಾರ್ ಕಾರ್ಡ್ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ, ಬ್ಯಾಂಕ್ ಪಾಸ್ಬುಕ್ ಪ್ರತಿ ಹಾಗೂ ಎಲ್ಲಾ ಜಮೀನಿನ ಪಹಣಿಗಳೊಂದಿಗೆ (RTC) ಸಮೀಪದ ರೈತ ಸಂಪರ್ಕ ಕೇಂದ್ರ, ಕಂದಾಯ, ತೋಟಗಾರಿಕೆ ಅಥವಾ ರೇಷ್ಮೆ ಇಲಾಖೆಯ ಕಚೇರಿಗಳನ್ನು ಸಂಪರ್ಕಿಸಿ ‘ಫ್ರೂಟ್ಸ್ ಐಡಿ’ (FRUITS ID) ಪಡೆದುಕೊಳ್ಳಬೇಕು ಎಂದು ಅವರು ವಿವರಿಸಿದರು. ಒಂದು ವೇಳೆ ರೈತರು ಈ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸದಿದ್ದರೆ, ಭವಿಷ್ಯದಲ್ಲಿ ಸರ್ಕಾರದಿಂದ ಸಿಗುವ ವಿವಿಧ ಆರ್ಥಿಕ ನೆರವು ಮತ್ತು ಇಲಾಖಾವಾರು ಸೌಲಭ್ಯಗಳಿಂದ ವಂಚಿತರಾಗುವ ಸಾಧ್ಯತೆಯಿದೆ. ಆದ್ದರಿಂದ ಜಿಲ್ಲೆಯ ಎಲ್ಲಾ ರೈತರು ಕೂಡಲೇ ಈ ತಂತ್ರಾಂಶದಲ್ಲಿ ತಮ್ಮ ವಿವರಗಳನ್ನು ಅಪ್‌ಡೇಟ್ ಮಾಡಿಕೊಳ್ಳುವ ಮೂಲಕ ಸರ್ಕಾರದ ಯೋಜನೆಗಳ ಲಾಭ ಪಡೆಯಬೇಕು ಎಂದು ಅವರು ಮನವಿ ಮಾಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ರೈತರು ಈ ದಾಖಲೆಗಳೊಂದಿಗೆ ಸಮೀಪದ
ಇವುಗಳನ್ನು ಸಂಪರ್ಕಿಸಿ ತಮ್ಮ ‘FRUITS ID’ ಪಡೆಯಬಹುದು ಎಂದು ಸೂಚಿಸಲಾಗಿದೆ.
Farmers must register their land details in the FRUITS software to avail benefits of state and central government schemes. Joint Director Javeeda Naseema Khanum stated that schemes like PM-Kisan, crop insurance, and drought relief require mandatory FRUITS ID registration. Farmers are advised to complete the process with required documents to avoid missing benefits.
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…