ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಅರಣ್ಯ ಇಲಾಖೆ, ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗದ ಸಂಯುಕ್ತ ಆಶ್ರಯದಲ್ಲಿ ದಶಲಕ್ಷ ಹಣ್ಣಿನ ಗಿಡಗಳ ನಾಟಿ ಕಾರ್ಯಕ್ರಮ ಜೂ.23ರ ಗುರುವಾರ ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ತಾಲೂಕಿನ ಬಡಕೋಡಿ ಗ್ರಾಮದ ಎರ್ಮೋಡಿ ಅರಣ್ಯ ಪ್ರದೇಶದಲ್ಲಿ ಆಯೋಜಿಸಲಾಗಿದೆ.
ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಅರಣ್ಯ ಸಚಿವರಾದ ಉಮೇಶ.ಕತ್ತಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಅವರು ದೇವರಕಾಡು ಸಸಿ, ವಿಧಾನಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್ ಶೌರ್ಯ ವನ ಸಸಿ, ಕೆ. ಪ್ರತಾಪಸಿಂಹ ನಾಯಕ್ ಕೆರೆಯಂಗಳ ಸಸಿ, ಹೊಸಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕರುಣಾಕರ ಪೂಜಾರಿ ಹಂಪಲು ಸಸಿ ಹಾಗೂ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಎಸ್.ನೆಟಲ್ ಕರ್ ಶಾಲಾ ವನ ಸಸಿ ವಿತರಿಸುವರು.Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement
Advertisement

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಬೆಳ್ತಂಗಡಿ| ಜೂ.23 ರಂದು ದಶಲಕ್ಷ ಹಣ್ಣಿನ ಗಿಡಗಳ ನಾಟಿ |"