ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಅರಣ್ಯ ಇಲಾಖೆ, ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗದ ಸಂಯುಕ್ತ ಆಶ್ರಯದಲ್ಲಿ ದಶಲಕ್ಷ ಹಣ್ಣಿನ ಗಿಡಗಳ ನಾಟಿ ಕಾರ್ಯಕ್ರಮ ಜೂ.23ರ ಗುರುವಾರ ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ತಾಲೂಕಿನ ಬಡಕೋಡಿ ಗ್ರಾಮದ ಎರ್ಮೋಡಿ ಅರಣ್ಯ ಪ್ರದೇಶದಲ್ಲಿ ಆಯೋಜಿಸಲಾಗಿದೆ.
ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಅರಣ್ಯ ಸಚಿವರಾದ ಉಮೇಶ.ಕತ್ತಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಅವರು ದೇವರಕಾಡು ಸಸಿ, ವಿಧಾನಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್ ಶೌರ್ಯ ವನ ಸಸಿ, ಕೆ. ಪ್ರತಾಪಸಿಂಹ ನಾಯಕ್ ಕೆರೆಯಂಗಳ ಸಸಿ, ಹೊಸಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕರುಣಾಕರ ಪೂಜಾರಿ ಹಂಪಲು ಸಸಿ ಹಾಗೂ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಎಸ್.ನೆಟಲ್ ಕರ್ ಶಾಲಾ ವನ ಸಸಿ ವಿತರಿಸುವರು. ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ, ಮೂಡಬಿದ್ರೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್, ಶ್ರೀಕ್ಷೇತ್ರ ಪಡ್ಡ್ಯಾರ ಬೆಟ್ಟು ಧರ್ಮದರ್ಶಿಗಳಾದ ಜೀವಂಧರ್ ಕುಮಾರ್ ಗೌರವ ಉಪಸ್ಥಿತಿ ವಹಿಸುವರು.https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…