ಭಾರತಕ್ಕೆ #Bharat ಈ ಬಾರಿ ಜಿ20 ಶೃಂಗ ಸಭೆಯ ನೇತೃತ್ವದ ಸಾರಥ್ಯ ಸಿಕ್ಕಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ಈಗಾಗಲೇ ಭಾರಿ ತಯಾರಿ ನಡೆದಿದೆ. ವಿಶ್ವದ ಘಟಾನುಘಟಿ ನಾಯಕರು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಭಾರತಕ್ಕೆ ಆಗಮಿಸಿರುವ ಅಮೆರಿಕದ#America ಅಧ್ಯಕ್ಷ ಜೋ ಬೈಡನ್ #JoeBiden ಜಿ20 ನಾಯಕರ ಶೃಂಗಸಭೆಗೂ ಮುನ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿ #NarendraModi ಅವರ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ಈ ವೇಳೆ ಅವರು ರಕ್ಷಣಾ ತಂತ್ರಜ್ಞಾನ ಪಾಲುದಾರಿಕೆಯ ವಿಷಯದಲ್ಲಿ ನಿಕಟ ಸಹಕಾರದ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ. ಜತೆಗೆ, ಈಗಾಗಲೇ ಮಾಡಿಕೊಂಡಿರುವ ಒಪ್ಪಂದಗಳ ಪ್ರಗತಿಯನ್ನು ಮೌಲ್ಯಮಾಪನ ಮಾಡುವ ಸಾಧ್ಯತೆಯಿದೆ ಎಂದು ತಜ್ಞರು ತಿಳಿಸಿದ್ದಾರೆ. ಜೂನ್‌ನಲ್ಲಿ ಮೋದಿಯವರು ಅಮೆರಿಕಕ್ಕೆ ಭೇಟಿ ನೀಡಿದ ನಂತರದ ಮೊದಲ ದ್ವಿಪಕ್ಷೀಯ ಸಭೆ ಇದಾಗಿದ್ದು, ಮಹತ್ವದ್ದಾಗಿದೆ ಎಂದು ಮೂಲಗಳು ಹೇಳಿವೆ.
ಜೂನ್‌ನಲ್ಲಿ ನಡೆದಿದ್ದ ದ್ವಿಪಕ್ಷೀಯ ಸಭೆಯಲ್ಲಿ ಜೆಟ್ ಎಂಜಿನ್ ತಂತ್ರಜ್ಞಾನವನ್ನು ಭಾರತಕ್ಕೆ ವರ್ಗಾಯಿಸುವಂತಹ ನಿರ್ಣಾಯಕ ನಿರ್ಧಾರ ಕೈಗೊಳ್ಳಲಾಗಿತ್ತು. ಜತೆಗೆ ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಪಾಲುದಾರಿಕೆಗೆ ಸಂಬಂಧಿಸಿದಂತೆ ಅನೇಕ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿತ್ತು. ಅವುಗಳಿಗೆ ಸಂಬಂಧಿಸಿ ಈವರೆಗೆ ಏನೇನು ಪ್ರಗತಿಯಾಗಿದೆ ಎಂಬ ಬಗ್ಗೆ ಉಭಯ ನಾಯಕರು ಈಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಚರ್ಚಿಸುವ ನಿರೀಕ್ಷೆ ಇದೆ. ಜತೆಗೆ, ರಕ್ಷಣಾ ತಂತ್ರಜ್ಞಾನ ಕ್ಷೇತ್ರದಲ್ಲಿ ಪಾಲುದಾರಿಕೆ ಸೇರಿದಂತೆ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಮುಂದುವರಿಸುವುದು ಹೇಗೆಂಬ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ ಎಂದು ಭಾರತೀಯ ಮಾಜಿ ರಾಜತಾಂತ್ರಿಕ ಅರುಣ್ ಸಿಂಗ್ ತಿಳಿಸಿರುವುದಾಗಿ ‘ಮನಿ ಕಂಟ್ರೋಲ್’ ವರದಿ ಮಾಡಿದೆ. ಸಿಂಗ್ ಅವರು 2015-16ರ ಅವಧಿಯಲ್ಲಿ ಅಮೆರಿಕದಲ್ಲಿ ಭಾರತದ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದರು.
ಈ ದ್ವಿಪಕ್ಷೀಯ ಸಭೆ ಬಹಳ ಮಹತ್ವದ್ದಾಗಿದೆ. ಬೈಡನ್ ಜಿ20 ಗಾಗಿ ಬರುತ್ತಿದ್ದಾರೆ. ಆದರೆ ಅವರು ಮತ್ತು ಭಾರತದ ಪ್ರಧಾನ ಮಂತ್ರಿ ದ್ವಿಪಕ್ಷೀಯ ಬಾಂಧವ್ಯದ ಬಗ್ಗೆ ಚರ್ಚಿಸಲು ಎದುರುನೋಡುತ್ತಿದ್ದಾರೆ ಎಂಬ ಅಂಶವು ಗಮನಾರ್ಹವಾಗಿದೆ ಎಂದು ಸಿಂಗ್ ಹೇಳಿದ್ದಾರೆ. ಡಿಜಿಟಲ್ ಕ್ರಾಂತಿಯನ್ನು ಎದುರಿಸುವ ನಿಟ್ಟಿನಲ್ಲಿ ಒಗ್ಗೂಡಿದ ವಿಶ್ವದ ಎರಡು ಅತ್ಯಂತ ದೊಡ್ಡ ಮತ್ತು ಶಕ್ತಿಶಾಲಿ ಪ್ರಜಾಪ್ರಭುತ್ವ ದೇಶಗಳಾಗಿವೆ ಅಮೆರಿಕ ಮತ್ತು ಭಾರತ ಎಂದು ಅವರು ಹೇಳಿದ್ದಾರೆ.
ಪ್ರಸ್ತುತ ಜಿ20 ಮತ್ತು ಬೈಡನ್ ಅವರೊಂದಿಗಿನ ದ್ವಿಪಕ್ಷೀಯ ಮಾತುಕತೆಯು ಸಂಬಂಧವನ್ನು ಭದ್ರಪಡಿಸಲು, ವಿಚಾರ ವಿನಿಮಯ ಮಾಡಿಕೊಳ್ಳಲು, ಭದ್ರತಾ ಪಾಲುದಾರಿಕೆಯನ್ನು ಹೆಚ್ಚಿಸಲು ಮತ್ತು ಒಟ್ಟಿಗೆ ಕೆಲಸ ಮಾಡಲು ಬಹಳ ಮುಖ್ಯವಾಗಿದೆ. ಡಿಜಿಟಲ್ ಕ್ರಾಂತಿಯ ಈ ಸಂದರ್ಭದಲ್ಲಿ ಚೀನಾ ವಿರುದ್ಧ ಅಮೆರಿಕ ಮತ್ತು ಭಾರತ ಒಟ್ಟಿಗೆ ಇರುವುದು ಬಹು ಮುಖ್ಯ. ಭಾರತದ ಡಿಜಿಟಲ್ ಕ್ರಾಂತಿಯ ಜೊತೆ ಪಾಲುದಾರಿಕೆಗೆ ಅಮೆರಿಕ ಬಿಟ್ಟರೆ ಅಷ್ಟೊಂದು ಉತ್ತಮವಾದ ಬೇರೆ ದೇಶವಿಲ್ಲ ಎಂದು ಮಣಿಪಾಲ್ ಗ್ಲೋಬಲ್ ಎಜುಕೇಶನ್‌ನ ಅಧ್ಯಕ್ಷ ಟಿವಿ ಮೋಹನ್‌ದಾಸ್ ಪೈ ಅಭಿಪ್ರಾಯಪಟ್ಟಿರುವುದಾಗಿ ವರದಿ ಉಲ್ಲೇಖಿಸಿದೆ.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…