ಗದಗದಲ್ಲಿ ರೈತರಿಂದ ಕಡಲೆ ಖರೀದಿ ಆರಂಭ : ಪ್ರತಿ ಕ್ವಿಂಟಲ್‌ಗೆ ₹5,875 ಬೆಂಬಲ ಬೆಲೆ ನಿಗದಿ

February 2, 2026
7:40 AM

2025-26 ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ಗದಗ ಜಿಲ್ಲೆಯ ರೈತರಿಂದ ಎಫ್‌ಎಕ್ಯೂ (FAQ) ಗುಣಮಟ್ಟದ ಕಡಲೆ ಹುಟ್ಟುವಳಿ ಖರೀದಿ ಪ್ರಕ್ರಿಯೆ ಆರಂಭವಾಗಿದೆ. ಪ್ರತಿ ಕ್ವಿಂಟಾಲ್ ಕಡಲೆಗೆ ₹5,875 ಬೆಂಬಲ ಬೆಲೆ ನಿಗದಿಪಡಿಸಲಾಗಿದೆ ಎಂದು ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ತಿಳಿಸಿದ್ದಾರೆ.

ಕಡಲೆ ಹುಟ್ಟುವಳಿಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿಸುವ ಕುರಿತು ಜರುಗಿದ ವಿಶೇಷ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿಗಳಂತೆ ಜಿಲ್ಲೆಯ ರೈತರಿಗೆ ನಿಗದಿತ ಪ್ರಮಾಣದಲ್ಲಿ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಈ ಯೋಜನೆಯಡಿ FAQ (Fair Average Quality) ಮಟ್ಟದ ಕಡಲೆ ಕಾಳುಗಳಿಗೆ ಮಾತ್ರ ಖರೀದಿ ನಡೆಯಲಿದ್ದು, ಉತ್ತಮ ಗುಣಮಟ್ಟದ ಹುಟ್ಟುವಳಿಗೆ ಆದ್ಯತೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು. ಸರ್ಕಾರದ ಮಾರ್ಗಸೂಚಿಗಳನ್ವಯ ಪ್ರತಿ ರೈತರಿಂದ ಎಕರೆಗೆ 4 ಕ್ವಿಂಟಲ್, ಗರಿಷ್ಟವಾಗಿ 40 ಕ್ವಿಂಟಲ್‌ವರೆಗೆ FAQ ಗುಣಮಟ್ಟದ ಕಡಲೆ ಖರೀದಿಸಲು ಅವಕಾಶ ನೀಡಲಾಗಿದೆ. ಬೆಂಬಲ ಬೆಲೆ ಯೋಜನೆಯ ಮೂಲಕ ರೈತರಿಗೆ ಮಾರುಕಟ್ಟೆ ಬೆಲೆ ಕುಸಿತದ ಹೊತ್ತಲ್ಲೂ ಸ್ಥಿರ ಆದಾಯ ಸಿಗಲಿದೆ. ಕಡಲೆ ಬೆಳೆಗಾರರಿಗೆ ಇದು ಮಹತ್ವದ ನೆರವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
September 28, 2026
2:31 PM
by: ದ ರೂರಲ್ ಮಿರರ್.ಕಾಂ
ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ
September 28, 2026
1:43 PM
by: ಮಿರರ್‌ ಡೆಸ್ಕ್‌
ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?
September 28, 2026
1:03 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ
September 28, 2026
11:34 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror