2025-26 ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ಗದಗ ಜಿಲ್ಲೆಯ ರೈತರಿಂದ ಎಫ್‌ಎಕ್ಯೂ (FAQ) ಗುಣಮಟ್ಟದ ಕಡಲೆ ಹುಟ್ಟುವಳಿ ಖರೀದಿ ಪ್ರಕ್ರಿಯೆ ಆರಂಭವಾಗಿದೆ. ಪ್ರತಿ ಕ್ವಿಂಟಾಲ್ ಕಡಲೆಗೆ ₹5,875 ಬೆಂಬಲ ಬೆಲೆ ನಿಗದಿಪಡಿಸಲಾಗಿದೆ ಎಂದು ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ತಿಳಿಸಿದ್ದಾರೆ.
ಕಡಲೆ ಹುಟ್ಟುವಳಿಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿಸುವ ಕುರಿತು ಜರುಗಿದ ವಿಶೇಷ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿಗಳಂತೆ ಜಿಲ್ಲೆಯ ರೈತರಿಗೆ ನಿಗದಿತ ಪ್ರಮಾಣದಲ್ಲಿ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಈ ಯೋಜನೆಯಡಿ FAQ (Fair Average Quality) ಮಟ್ಟದ ಕಡಲೆ ಕಾಳುಗಳಿಗೆ ಮಾತ್ರ ಖರೀದಿ ನಡೆಯಲಿದ್ದು, ಉತ್ತಮ ಗುಣಮಟ್ಟದ ಹುಟ್ಟುವಳಿಗೆ ಆದ್ಯತೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು. ಸರ್ಕಾರದ ಮಾರ್ಗಸೂಚಿಗಳನ್ವಯ ಪ್ರತಿ ರೈತರಿಂದ ಎಕರೆಗೆ 4 ಕ್ವಿಂಟಲ್, ಗರಿಷ್ಟವಾಗಿ 40 ಕ್ವಿಂಟಲ್‌ವರೆಗೆ FAQ ಗುಣಮಟ್ಟದ ಕಡಲೆ ಖರೀದಿಸಲು ಅವಕಾಶ ನೀಡಲಾಗಿದೆ. ಬೆಂಬಲ ಬೆಲೆ ಯೋಜನೆಯ ಮೂಲಕ ರೈತರಿಗೆ ಮಾರುಕಟ್ಟೆ ಬೆಲೆ ಕುಸಿತದ ಹೊತ್ತಲ್ಲೂ ಸ್ಥಿರ ಆದಾಯ ಸಿಗಲಿದೆ. ಕಡಲೆ ಬೆಳೆಗಾರರಿಗೆ ಇದು ಮಹತ್ವದ ನೆರವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…