Advertisement
ಸುದ್ದಿಗಳು

ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ

Share

ಗದಗ ಜಿಲ್ಲೆಯಲ್ಲಿ ಪ್ರಸಕ್ತ ಬೇಸಿಗೆಯ ಅವಧಿಯಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದ್ದಾರೆ. ಮುಂದಿನ 3 ರಿಂದ 6 ದಿನಗಳವರೆಗೆ ತೀವ್ರ ಬಿಸಿಗಾಳಿಯ (Heat Wave) ಪ್ರಭಾವ ಕಂಡುಬರಲಿದ್ದು, ಸಾರ್ವಜನಿಕರು ವಿಶೇಷ ಜಾಗ್ರತೆ ವಹಿಸುವಂತೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವಂತೆ, ಮಕ್ಕಳು, ವೃದ್ಧರು ಮತ್ತು ಅನಾರೋಗ್ಯ ಪೀಡಿತರು ಹೆಚ್ಚು ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇರುವುದರಿಂದ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ತಿಳಿಸಿದ್ದಾರೆ.

ತೀವ್ರ ಬಿಸಿಲಿನ ಪರಿಣಾಮವಾಗಿ ಉಂಟಾಗುವ ನಿರ್ಜಲೀಕರಣ (Dehydration), ಬಳಲಿಕೆ ಹಾಗೂ ಶಾಖಾಘಾತ (Sunstroke) ತಡೆಗಟ್ಟಲು ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು :

  • ಬಾಯಾರಿಕೆ ಇಲ್ಲದಿದ್ದರೂ ಸಹ ನಿಯಮಿತವಾಗಿ ಹೆಚ್ಚು ನೀರು ಕುಡಿಯಿರಿ
  • ಹೊರಗೆ ಹೋಗುವಾಗ ಹಗುರ, ತಿಳಿಬಣ್ಣದ ಮತ್ತು ಸಡಿಲವಾದ ಹತ್ತಿ ಬಟ್ಟೆ ಧರಿಸಿ
  • ಬಿಸಿಲಿನಿಂದ ರಕ್ಷಣೆಗಾಗಿ ಛತ್ರಿ, ಟೋಪಿ, ಕನ್ನಡಕ ಬಳಸಿ
  • ಮಧ್ಯಾಹ್ನದ ಗರಿಷ್ಠ ಬಿಸಿಲಿನ ವೇಳೆಯಲ್ಲಿ ಹೊರಗಡೆ ಹೋಗುವುದನ್ನು ತಪ್ಪಿಸಿ
  • ಶರೀರದಲ್ಲಿ ನೀರಿನ ಮಟ್ಟವನ್ನು ಕಾಪಾಡಿಕೊಳ್ಳಲು ಹಣ್ಣು ಮತ್ತು ದ್ರವ ಪದಾರ್ಥಗಳನ್ನು ಸೇವಿಸಿ

ಈ ಬಾರಿ ಬೇಸಿಗೆಯಲ್ಲಿ ಗದಗ ಜಿಲ್ಲೆಯಲ್ಲಿ ತಾಪಮಾನ ಏರಿಕೆಯಾಗುತ್ತಿರುವುದು ಸ್ಪಷ್ಟವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಹವಾಮಾನದಲ್ಲಿ ಕಂಡುಬರುವ ಈ ಬದಲಾವಣೆಗಳು ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Gadag district is expected to experience higher-than-normal temperatures during the current summer. District Commissioner C.N. Sridhar has warned of a heat wave lasting 3 to 6 days and advised people, especially children, the elderly, and the sick, to take precautions. Authorities urge citizens to stay hydrated, avoid peak heat hours, and follow safety guidelines to prevent dehydration and sunstroke.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ

ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…

1 hour ago

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

14 hours ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

1 day ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

2 days ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

2 days ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

3 days ago