ಗದಗದ ಲಕ್ಕುಂಡಿಯಲ್ಲಿ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯಕ್ರಮಕ್ಕೆ ಚಾಲನೆ

November 25, 2024
7:33 AM

ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದೆ.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ  ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್, ಸಾಂಸ್ಕೃತಿಕವಾಗಿ, ಪಾರಂಪರಿಕವಾಗಿ, ಶ್ರೀಮಂತವಾಗಿರುವ ಲಕ್ಕುಂಡಿ, ಲೊಕ್ಕಿಗುಂಡಿ ಎಂಬ ಹೆಸರಿನಿಂದ ರಾಮಾಯಣ, ಮಹಾಭಾರತದ ಕಾಲದಿಂದಲೂ ಪ್ರಸಿದ್ಧಿ ಹೊಂದಿತ್ತು. ಇಲ್ಲಿಯವರೆಗೆ ಲಕ್ಕುಂಡಿಯ ಇತಿಹಾಸ, ಶಿಲ್ಪಕಲೆಗಳು, ಶಾಸನಗಳನ್ನು ನಿರ್ಲಕ್ಷ್ಯ ಆಗಿದ್ದವು. ಇಂದು ಜಾಗೃತರಾಗಿ ನಮ್ಮ ಇತಿಹಾಸ, ಪರಂಪರೆ, ಸಂಸ್ಕೃತಿ ಹಾಗೂ ಶ್ರೀಮಂತಿಕೆಯನ್ನು ಜಗತ್ತಿಗೆ ಪರಿಚಯಿಸಬೇಕಿದೆ. ಲಕ್ಕುಂಡಿಯು ಜಾಗತಿಕ, ಪಾರಂಪರಿಕ ಪಟ್ಟಿಯಲ್ಲಿ ಸೇರುವುದು ಸನ್ನಿಹಿತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 101 ಬಾವಿ, 101 ದೇವಸ್ಥಾನಗಳ ಇತಿಹಾಸ ಹೊಂದಿರುವ ಲಕ್ಕುಂಡಿಯಲ್ಲಿ ಪ್ರಾಚ್ಯಾಶೇಷಗಳ ಸಂಗ್ರಹಣೆ ಮೂಲಕ ಹುದುಗಿ ಹೋಗಿರುವ ದೇವಸ್ಥಾನ ಹಾಗೂ ಬಾವಿಗಳ ಅನ್ವೇಷಣೆ ಹಾಗೂ ಮರುಸೃಷ್ಟಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.  ಲಕ್ಕುಂಡಿಯಲ್ಲಿ ಕೈಗೊಂಡಿರುವ ಪ್ರಾಚ್ಯಾವಶೇಷಗಳ ಅನ್ವೇಷಣೆ ರಾಜ್ಯಕ್ಕೆ ದಿಕ್ಸೂಚಿಯಾಗಬೇಕು ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror