ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದೆ.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್, ಸಾಂಸ್ಕೃತಿಕವಾಗಿ, ಪಾರಂಪರಿಕವಾಗಿ, ಶ್ರೀಮಂತವಾಗಿರುವ ಲಕ್ಕುಂಡಿ, ಲೊಕ್ಕಿಗುಂಡಿ ಎಂಬ ಹೆಸರಿನಿಂದ ರಾಮಾಯಣ, ಮಹಾಭಾರತದ ಕಾಲದಿಂದಲೂ ಪ್ರಸಿದ್ಧಿ ಹೊಂದಿತ್ತು. ಇಲ್ಲಿಯವರೆಗೆ ಲಕ್ಕುಂಡಿಯ ಇತಿಹಾಸ, ಶಿಲ್ಪಕಲೆಗಳು, ಶಾಸನಗಳನ್ನು ನಿರ್ಲಕ್ಷ್ಯ ಆಗಿದ್ದವು. ಇಂದು ಜಾಗೃತರಾಗಿ ನಮ್ಮ ಇತಿಹಾಸ, ಪರಂಪರೆ, ಸಂಸ್ಕೃತಿ ಹಾಗೂ ಶ್ರೀಮಂತಿಕೆಯನ್ನು ಜಗತ್ತಿಗೆ ಪರಿಚಯಿಸಬೇಕಿದೆ. ಲಕ್ಕುಂಡಿಯು ಜಾಗತಿಕ, ಪಾರಂಪರಿಕ ಪಟ್ಟಿಯಲ್ಲಿ ಸೇರುವುದು ಸನ್ನಿಹಿತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 101 ಬಾವಿ, 101 ದೇವಸ್ಥಾನಗಳ ಇತಿಹಾಸ ಹೊಂದಿರುವ ಲಕ್ಕುಂಡಿಯಲ್ಲಿ ಪ್ರಾಚ್ಯಾಶೇಷಗಳ ಸಂಗ್ರಹಣೆ ಮೂಲಕ ಹುದುಗಿ ಹೋಗಿರುವ ದೇವಸ್ಥಾನ ಹಾಗೂ ಬಾವಿಗಳ ಅನ್ವೇಷಣೆ ಹಾಗೂ ಮರುಸೃಷ್ಟಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಲಕ್ಕುಂಡಿಯಲ್ಲಿ ಕೈಗೊಂಡಿರುವ ಪ್ರಾಚ್ಯಾವಶೇಷಗಳ ಅನ್ವೇಷಣೆ ರಾಜ್ಯಕ್ಕೆ ದಿಕ್ಸೂಚಿಯಾಗಬೇಕು ಎಂದು ಹೇಳಿದ್ದಾರೆ.
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…
ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…
ಕೃತಿಕಾ, 9 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ…
ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನ, ರಾಶಿಗಳ ಸಂಯೋಜನೆ, ಮತ್ತು ಜನ್ಮಕುಂಡಲಿಯ ಭಾವಗಳು…
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.