Advertisement
MIRROR FOCUS

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

Share

2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರೈತ ಸಂಪರ್ಕ ಕೇಂದ್ರಗಳು ಹಾಗೂ ಹೆಚ್ಚುವರಿ ಬೀಜ ವಿತರಣಾ ಕೇಂದ್ರಗಳ ಮೂಲಕ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಿಸಲು ಕೃಷಿ ಇಲಾಖೆ ಕ್ರಮ ಕೈಗೊಂಡಿದೆ.

ಜಿಲ್ಲೆಯ ಹಿಂಗಾರು ಹಂಗಾಮಿನ ಪ್ರಮುಖ ಬೆಳೆಗಳಾದ ಕಡಲೆ, ಜೋಳ, ಶೇಂಗಾ ಹಾಗೂ ಗೋಧಿ ಬೆಳೆಗಳ ಬಿತ್ತನೆ ಬೀಜಗಳನ್ನು ರೈತರಿಗೆ ವಿತರಿಸಲಾಗುತ್ತಿದೆ ಎಂದು ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಚೇತನಾ ಪಾಟೀಲ ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲ ವರ್ಗದ ರೈತರಿಗೆ ಗರಿಷ್ಠ 5 ಎಕರೆ ಅಥವಾ ರೈತರ ಭೂ ಹಿಡುವಳಿಗೆ ಅನುಗುಣವಾಗಿ ಬಿತ್ತನೆ ಬೀಜ ವಿತರಿಸಲಾಗುತ್ತಿದೆ. ಹಿಂಗಾರು ಹಂಗಾಮಿಗೆ ಅಗತ್ಯವಿರುವ ವಿವಿಧ ಬೆಳೆಗಳ ಬಿತ್ತನೆ ಬೀಜಗಳನ್ನು ದಾಸ್ತಾನು ಮಾಡಿಕೊಳ್ಳಲಾಗಿದ್ದು, ಯಾವುದೇ ಬೆಳೆಯ ಬೀಜದ ಕೊರತೆ ಉಂಟಾಗದಂತೆ ಕ್ರಮ ವಹಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬಿತ್ತನೆಗೂ ಮುನ್ನ ಮಣ್ಣಿನ ತೇವಾಂಶ ಪರಿಶೀಲಿಸಿ : ಹಿಂಗಾರು ಬಿತ್ತನೆ ಕೈಗೊಳ್ಳುವ ರೈತರು ಮಣ್ಣಿನಲ್ಲಿ ಸಾಕಷ್ಟು ತೇವಾಂಶ ಇರುವುದನ್ನು ಖಚಿತಪಡಿಸಿಕೊಂಡ ಬಳಿಕವೇ ಬಿತ್ತನೆ ಮಾಡಬೇಕು ಎಂದು ಕೃಷಿ ಇಲಾಖೆ ಸಲಹೆ ನೀಡಿದೆ.

ಮಣ್ಣಿನ ತೇವಾಂಶಕ್ಕೆ ಅನುಗುಣವಾಗಿ ಬಿತ್ತನೆ ಸಮಯ ನಿರ್ಧರಿಸುವುದರಿಂದ ಬೀಜ ಮೊಳಕೆಯೊಡೆಯಲು ಅನುಕೂಲವಾಗುತ್ತದೆ. ಹೀಗಾಗಿ, ರೈತರು ಮಣ್ಣಿನ ಪರಿಸ್ಥಿತಿ ಹಾಗೂ ಬೆಳೆಗಳ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಬಿತ್ತನೆ ಕಾರ್ಯ ಕೈಗೊಳ್ಳಬೇಕು ಎಂದು ಇಲಾಖೆ ಸೂಚಿಸಿದೆ.

ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಪಡೆಯಲು ರೈತರು ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಹೆಚ್ಚುವರಿ ಬೀಜ ವಿತರಣಾ ಕೇಂದ್ರವನ್ನು ಸಂಪರ್ಕಿಸಬಹುದು. ಬೀಜ ವಿತರಣೆ, ಅರ್ಹತೆ ಹಾಗೂ ಲಭ್ಯವಿರುವ ತಳಿಗಳ ಕುರಿತು ಸ್ಥಳೀಯ ಕೃಷಿ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆಯುವುದು ಸೂಕ್ತ.

The 2026–27 rabi season has commenced in Gadag district, Karnataka. The Agriculture Department is distributing subsidised seeds of chickpea, sorghum, groundnut and wheat through Raitha Samparka Kendras and additional seed distribution centres. According to Joint Director of Agriculture Chetana Patil, seeds are being provided to all categories of farmers for a maximum of five acres or according to their landholding. The department says adequate stocks have been arranged and advises farmers to check soil moisture before sowing.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸುಳ್ಯದಲ್ಲಿ ಉದ್ಯೋಗಾವಕಾಶ – ನ.12ರಂದು ಬೃಹತ್ ಉದ್ಯೋಗಮೇಳ

ಸುಳ್ಯ ತಾಲೂಕು ಪಂಚಾಯತ್‌ನಲ್ಲಿ ನವೆಂಬರ್ 12ರಂದು ಬೃಹತ್ ಉದ್ಯೋಗಮೇಳ ನಡೆಯಲಿದೆ. 50ಕ್ಕೂ ಹೆಚ್ಚು…

1 day ago

ಹಿಂಗಾರು ಬಿತ್ತನೆಗೆ ಹವಾಮಾನದ ಹೊಡೆತ – ದೇಶದಲ್ಲಿ ಶೇ.46ರಷ್ಟು ಕುಸಿತ, ಸಾಸಿವೆ-ಕಡಲೆ ಬಿತ್ತನೆ ಭಾರಿ ಇಳಿಕೆ – ಆಹಾರ ಹಣದುಬ್ಬರದ ಆತಂಕ

ದೇಶದಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಪ್ರಮಾಣ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.46ರಷ್ಟು ಕುಸಿದಿದ್ದು,…

2 days ago

ರಾಜ್ಯದ ಮೂಲಸೌಕರ್ಯ ಅಭಿವೃದ್ಧಿಗೆ ₹20,000 ಕೋಟಿ – ರಸ್ತೆ, ಸೇತುವೆ ಹಾಗೂ ಬೆಂಗಳೂರು ಸುತ್ತಮುತ್ತಲಿನ ಕಾಮಗಾರಿಗಳಿಗೆ ಆದ್ಯತೆ

ರಾಜ್ಯದಲ್ಲಿ ರಸ್ತೆ, ಸೇತುವೆ, ರಾಜ್ಯ ಹೆದ್ದಾರಿ ಹಾಗೂ ಬೆಂಗಳೂರು ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿಗಾಗಿ…

2 days ago

ಹವಾಮಾನ ವರದಿ | 08-11-2026 | ನ.11ರ ಹವಾಮಾನ ಬದಲಾವಣೆಯ ಮೇಲೆ ನಿಗಾ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಇಂದು ಗುಡುಗು…

2 days ago

ಹವಾಮಾನ ವರದಿ | 07-11-2026 | ನ.14ರಿಂದ ಮತ್ತೆ ಮಳೆ ? ಅರಬ್ಬಿ ಸಮುದ್ರದಲ್ಲಿ ಹೊಸ ಬೆಳವಣಿಗೆ

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 9ರಿಂದ ಒಣಹವೆ, ಬಿಸಿಲು ಹಾಗೂ ರಾತ್ರಿ…

3 days ago

ದೀಪಾವಳಿ ಪಟಾಕಿ ಅವಘಡ: ಮಕ್ಕಳ ಕಣ್ಣು, ಮುಖದ ರಕ್ಷಣೆಗೆ ಪೋಷಕರು ಎಚ್ಚರ ವಹಿಸಿ

ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ಮಕ್ಕಳ ಕಣ್ಣು ಮತ್ತು ಮುಖಕ್ಕೆ ಗಂಭೀರ ಗಾಯಗಳಾಗುವ…

4 days ago