ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿಸಲು ಗದಗ ಜಿಲ್ಲಾಡಳಿತ ನಿರ್ಧರಿಸಿದೆ. ಸೂರ್ಯಕಾಂತಿಗೆ ಪ್ರತಿ ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ಪ್ರತಿ ರೈತರಿಂದ ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಾಲ್ ಸೂರ್ಯಕಾಂತಿ ಖರೀದಿಸಲಾಗುತ್ತದೆ. ಒಬ್ಬ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಸೂರ್ಯಕಾಂತಿ ಖರೀದಿಸಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ರೈತರಿಂದ ಸೂರ್ಯಕಾಂತಿ ಖರೀದಿಸಲು ಜಿಲ್ಲೆಯ 11 ಕಡೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ನಿರ್ಧರಿಸಿದೆ.
ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಲು ರೈತರು ನಿಗದಿತ ಖರೀದಿ ಕೇಂದ್ರಗಳ ಮೂಲಕ ಮಾರಾಟ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.
The Gadag district administration has decided to procure FAQ-quality sunflower under the Central Government’s Minimum Support Price scheme for the current season. The MSP has been fixed at ₹8,343 per quintal, with procurement limited to a maximum of 4 quintals per acre and 20 quintals per farmer. Eleven procurement centres will be opened across the district.


