ಗದಗ ಜಿಲ್ಲೆಯ ಹುಲಕೋಟಿ ಗ್ರಾಮದ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಮಾಡಲಗೇರಿ ಗ್ರಾಮದಲ್ಲಿ ಬ್ಯಾಡಗಿ ಮೆಣಸಿನಕಾಯಿ ಬೆಳೆಯ ಕ್ಷೇತ್ರೋತ್ಸವ ಭರಮಗೌಡ ರಾಯನಗೌಡರ ಹೊಲದಲ್ಲಿ ಜರುಗಿತು.
ಕೃಷಿ ವಿಜ್ಞಾನಿ ಡಾ.ವಿನಾಯಕ ನಿರಂಜನ್ ಮಾತನಾಡಿ, ಮುಂಡರಗಿ ತಾಲೂಕಿನ ಹಳ್ಳಿಗುಡಿ, ರೋಣ ತಾಲೂಕಿನ ಮಾಡಲಗೇರಿ ಹಾಗೂ ಗದಗ ತಾಲೂಕಿನ ಅಸುಂಡಿಯಲ್ಲಿ ಗ್ರಾಮಗಳಲ್ಲಿ ರುದ್ರಾ ಮೆಣಸಿನಕಾಯಿ ತಳಿಯನ್ನು ಸಮಗ್ರ ಬೆಳೆ ನಿರ್ವಹಣೆಯೊಂದಿಗೆ ಅಳವಡಿಸಲಾಗಿದೆ ಎಂದು ತಿಳಿಸಿದರು. ತೋಟಗಾರಿಕೆ ತಜ್ಞರಾದ ಹೇಮಾವತಿ ಹಿರೇಗೌಡರ ಮಾತನಾಡಿ, ರುದ್ರಾ ಮೆಣಸಿನಕಾಯಿ ತಳಿಯು ಕಾಯಿಗಳು ಒಣಗಿದಾಗ ಕಡು ಕೆಂಪು ಬಣ್ಣಕ್ಕೆ ತಿರುಗುತ್ತದೆ. ಎಕರೆಗೆ 8 ರಿಂದ 10 ಕ್ವಿಂಟಲ್ ಒಣ ಮೆಣಸಿನಕಾಯಿ ಕೊಡುವ ಸಾಮರ್ಥ್ಯ ಹೊಂದಿದೆ ಎಂದರು.
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ…
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…
ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…
ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…
ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…