ಮಾನವಸಹಿತ ‘ಗಗನಯಾನ’​ ಮೊದಲ ಹಾರಾಟ ಪರೀಕ್ಷೆ ಅಕ್ಟೋಬರ್ 21ಕ್ಕೆ

October 16, 2023
8:14 PM

ಆಂಧ್ರಪ್ರದೇಶದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಮಾನವಸಹಿತ ಗಗನಯಾನ ಮಿಷನ್‌ನ ಮೊದಲ ಪರೀಕ್ಷಾರ್ಥ ಹಾರಾಟವನ್ನು ಅಕ್ಟೋಬರ್ 21 ರಂದು ನಡೆಸಲಿದೆ ಎಂದು ಸೋಮವಾರ ಇಸ್ರೋ ಮಾಹಿತಿ ನೀಡಿದೆ. ಚಂದ್ರಯಾನ, ಸೂರ್ಯಯಾನ ಯೋಜನೆಗಳ ಯಶಸ್ಸಿನ ಮೂಲಕ ನಭೋಮಂಡಲದಲ್ಲಿ ಇತಿಹಾಸ ನಿರ್ಮಿಸಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಈಗ ಮತ್ತೊಂದು ಮಹತ್ವದ ಯೋಜನೆಗೆ ಸಜ್ಜಾಗುತ್ತಿದೆ.

ಟಿವಿ-ಡಿ1 ಪರೀಕ್ಷಾ ಹಾರಾಟವನ್ನು ಅಕ್ಟೋಬರ್ 21 ರಂದು ಶ್ರೀಹರಿಕೋಟಾದ ಎಸ್‌ಡಿಎಸ್‌ಸಿ-ಎಸ್​ಎಚ್​ಎಆರ್​ನಿಂದ ಬೆಳಿಗ್ಗೆ 7 ರಿಂದ 9 ರವರೆಗೆ ನಿಗದಿಪಡಿಸಲಾಗಿದೆ. ಮಾನವಸಹಿತ ಗಗನಯಾನ ಯೋಜನೆಯ ಪರೀಕ್ಷಾರ್ಥ ಪ್ರಯೋಗವನ್ನು ನಡೆಸುವುದಾಗಿ ಇಸ್ರೋ ಇಂದು ಪ್ರಕಟಿಸಿದೆ. ಇದರಲ್ಲಿ ಮೂವರು ಗಗನಯಾತ್ರಿಗಳು ಹಾರಾಟ ನಡೆಸಲಿದ್ದಾರೆ ಎಂದು ಇಸ್ರೋ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ನೀಡಿದೆ.

ಗಗನಯಾನದಲ್ಲಿ 3 ಸದಸ್ಯರ ತಂಡವನ್ನು 400 ಕಿಮೀ ಮೇಲಿನ ಭೂಕಕ್ಷೆಗೆ 3 ದಿನಗಳ ಕಾರ್ಯಾಚರಣೆಗಾಗಿ ಕಳುಹಿಸಲಾಗುತ್ತದೆ. ಇದಾದ ನಂತರ ಸಿಬ್ಬಂದಿ ಮಾಡ್ಯೂಲ್ ಅನ್ನು ಸಮುದ್ರದಲ್ಲಿ ಸುರಕ್ಷಿತವಾಗಿ ಇಳಿಸಲಾಗುತ್ತದೆ. ಭಾರತ ತನ್ನ ಈ ಉದ್ದೇಶದಲ್ಲಿ ಯಶಸ್ವಿಯಾದರೆ ಅದನ್ನು ಮಾಡಿದ ನಾಲ್ಕನೇ ರಾಷ್ಟ್ರವಾಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror