ಆಂಧ್ರಪ್ರದೇಶದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಮಾನವಸಹಿತ ಗಗನಯಾನ ಮಿಷನ್‌ನ ಮೊದಲ ಪರೀಕ್ಷಾರ್ಥ ಹಾರಾಟವನ್ನು ಅಕ್ಟೋಬರ್ 21 ರಂದು ನಡೆಸಲಿದೆ ಎಂದು ಸೋಮವಾರ ಇಸ್ರೋ ಮಾಹಿತಿ ನೀಡಿದೆ. ಚಂದ್ರಯಾನ, ಸೂರ್ಯಯಾನ ಯೋಜನೆಗಳ ಯಶಸ್ಸಿನ ಮೂಲಕ ನಭೋಮಂಡಲದಲ್ಲಿ ಇತಿಹಾಸ ನಿರ್ಮಿಸಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಈಗ ಮತ್ತೊಂದು ಮಹತ್ವದ ಯೋಜನೆಗೆ ಸಜ್ಜಾಗುತ್ತಿದೆ.
ಟಿವಿ-ಡಿ1 ಪರೀಕ್ಷಾ ಹಾರಾಟವನ್ನು ಅಕ್ಟೋಬರ್ 21 ರಂದು ಶ್ರೀಹರಿಕೋಟಾದ ಎಸ್‌ಡಿಎಸ್‌ಸಿ-ಎಸ್ಎಚ್ಎಆರ್ನಿಂದ ಬೆಳಿಗ್ಗೆ 7 ರಿಂದ 9 ರವರೆಗೆ ನಿಗದಿಪಡಿಸಲಾಗಿದೆ. ಮಾನವಸಹಿತ ಗಗನಯಾನ ಯೋಜನೆಯ ಪರೀಕ್ಷಾರ್ಥ ಪ್ರಯೋಗವನ್ನು ನಡೆಸುವುದಾಗಿ ಇಸ್ರೋ ಇಂದು ಪ್ರಕಟಿಸಿದೆ. ಇದರಲ್ಲಿ ಮೂವರು ಗಗನಯಾತ್ರಿಗಳು ಹಾರಾಟ ನಡೆಸಲಿದ್ದಾರೆ ಎಂದು ಇಸ್ರೋ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ನೀಡಿದೆ.
ಗಗನಯಾನದಲ್ಲಿ 3 ಸದಸ್ಯರ ತಂಡವನ್ನು 400 ಕಿಮೀ ಮೇಲಿನ ಭೂಕಕ್ಷೆಗೆ 3 ದಿನಗಳ ಕಾರ್ಯಾಚರಣೆಗಾಗಿ ಕಳುಹಿಸಲಾಗುತ್ತದೆ. ಇದಾದ ನಂತರ ಸಿಬ್ಬಂದಿ ಮಾಡ್ಯೂಲ್ ಅನ್ನು ಸಮುದ್ರದಲ್ಲಿ ಸುರಕ್ಷಿತವಾಗಿ ಇಳಿಸಲಾಗುತ್ತದೆ. ಭಾರತ ತನ್ನ ಈ ಉದ್ದೇಶದಲ್ಲಿ ಯಶಸ್ವಿಯಾದರೆ ಅದನ್ನು ಮಾಡಿದ ನಾಲ್ಕನೇ ರಾಷ್ಟ್ರವಾಗಲಿದೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…