Advertisement
ಸುದ್ದಿಗಳು

ಗೋವಾದಲ್ಲಿ 10 ನೇ ಶತಮಾನದ ಗಜಲಕ್ಷ್ಮಿ ಶಿಲ್ಪ ಪತ್ತೆ

Share

ಕ್ರಿ.ಶ 10 ನೇ ಶತಮಾನಕ್ಕೆ ಸೇರಿದ ವಿಶಿಷ್ಟವಾದ ಗಜಲಕ್ಷ್ಮಿ ಶಿಲ್ಪವು ಗೋವಾದ ಸತ್ತಾರಿ ತಾಲೂಕಿನ ವಾಲ್ವಂತಿ ನದಿಯಲ್ಲಿ ಪತ್ತೆಯಾಗಿದೆ ಎಂದು ಉಡುಪಿನ ಆದಿಮೆ ಕಲಾ ಟ್ರಸ್ಟ್ ನ ಸಂಸ್ಥಾಪಕ ಟ್ರಸ್ಟಿ ಟಿ. ಮುರುಗೇಶಿ ತಿಳಿಸಿದ್ದಾರೆ. ಈ ಶಿಲ್ಪವು ಸುಮಾರು 50 ಸೆ.ಮೀ ಉದ್ದ ಮತ್ತು 61 ಸೆ.ಮೀ ಅಗಲವಿದೆ ಎಂದು ತಿಳಿಸಿದ್ದಾರೆ.

ಉನ್ನತವಾದ ಪದ್ಮಪೀಠದ ಮೇಲೆ, ಅಭಯ ಮತ್ತು ವರದ ಹಸ್ತೆಯಾಗಿ ಕುಳಿತಿರುವ ಲಕ್ಷ್ಮಿಯು ಹಿಂದಿನ ಬಲಗೈಯಲ್ಲಿ ಕಮಲದ ಮೊಗ್ಗು, ಹಿಂದಿನ ಎಡಗೈಯಲ್ಲಿಯೂ ಸಹ ಕಮಲದ ಮೊಗ್ಗನ್ನು ಹಿಡಿದಿದ್ದಾಳೆ. ಕಿವಿಯಲ್ಲಿ ಮಕರಕುಂಡಲಗಳಿವೆ, ಆಕರ್ಷಕ ಕರಂಡಮುಕುಟವನ್ನು ಧರಿಸಿದ ದೇವಿಯು ಮುಖದಲ್ಲಿ ದೈವೀಕಳೆಯ ವರ್ಚಸ್ಸು ಎದ್ದು ತೋರುತ್ತದೆ ಎಂದು ಹೇಳಿದ್ದಾರೆ.

ದೇವಿಯ ಹಿಂಭಾಗದಲ್ಲಿ ಅಂಡಾಕಾರದ ಪ್ರಭಾವಳಿಯಿದ್ದು, ಮಧ್ಯದಲ್ಲಿ ಸಿಂಹದ ಲಲಾಟ ಬಿಂಬವಿದೆ. ಕಂಠೀಹಾರ, ಕೊರಳಹಾರ, ಕೇಯೂರ, ಮುಂತಾದ ಆಭರಣಗಳಿಂದ ಅಲಂಕೃತಳಾದ ಲಕ್ಷ್ಮಿಯ ಎಡ-ಬಲಗಳಲ್ಲಿ ಪವಿತ್ರ ಕಳಸಗಳನ್ನು ಹಿಡಿದಿರುವ ಎರಡು ಆನೆಗಳಿವೆ. ಪೀಠದ ಮಧ್ಯಭಾಗದಲ್ಲಿ ಗಂಡಭೇರುಂಡದ ಲತಾಕೋಷ್ಟಕವಿದೆ. ಶಿಲ್ಪವು ಸುಮಾರು 10ನೇ ಶತಮಾನದ ಶಿಲ್ಪಶೈಲಿಯಲ್ಲಿದ್ದು, ಗೋವಾ ಕದಂಬರ ಶಿಲ್ಪಶೈಲಿಯ ಉತ್ತಮ ಉದಾಹರಣೆಯಾಗಿದೆ. ಈ ಶಿಲ್ಪವು 50 ಸೆ.ಮೀ. ಎತ್ತರ ಹಾಗೂ 61 ಸೆ.ಮೀ. ಅಗಲವಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

16 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 day ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago