ಗಾಂಧಿ ಜಯಂತಿ | ಕಲ್ಮಡ್ಕ ಗ್ರಾಪಂ ವತಿಯಿಂದ ಗಾಂಧಿ ಜಯಂತಿ ದಿನಾಚರಣೆ

October 2, 2021
3:13 PM

ಅಜಾದಿ ಕಾ ಅಮೃತ ಮಹೋತ್ಸವದ ಮತ್ತು ಗಾಂಧಿ ಜಯಂತಿ ದಿನಾಚರಣೆಯನ್ನು ಕಲ್ಮಡ್ಕ ಗ್ರಾಪಂ ವತಿಯಿಂದ ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹಾಜಿರಾ ಗಫೂರ್  ದೀಪ ಬೆಳಗಿಸಿದರು, ಗ್ರಾಮ ಪಂಚಾಯತಿನ ಸ್ವಚ್ಛವಾಹಿನಿ ವಾಹನಕ್ಕೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಹೇಶ್ ಕುಮಾರ್ ಕೆ. ಎಸ್ ಇವರು ಚಾಲನೆಯನ್ನು ನೀಡಿದರು.

ಕಲ್ಮಡ್ಕ ಗ್ರಾಮ ಪಂಚಾಯತಿನ ನೂತನವಾಗಿ ನಿರ್ಮಿಸಿದ ಸ್ವಚ್ಛ ಸಂಕೀರ್ಣದ ಕಟ್ಟಡವನ್ನು ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ  ಅಬ್ದುಲ್ ಗಫೂರ್ ರಿಬ್ಬನ್ ಕತ್ತರಿಸುವುದರ ಮೂಲಕ ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ವಾಸುದೇವ ನಡ್ಕ ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಗಾಂಧಿ ನಡಿಗೆಯ ಮೂಲಕ ಸ್ವಚ್ಛತಾ ಜಾಥಾ ಮಾಡಲಾಯಿತು ಮತ್ತು ಉದ್ಯೋಗ ಖಾತರಿ ಹೆಚ್ಚುವರಿ ಕ್ರಿಯಾಯೋಜನೆ ಮತ್ತು ಸೋಕ್ ಪಿಟ್ 100 ದಿನಗಳ ಅಭಿಯಾನಕ್ಕೆ ಚಾಲನೆಯನ್ನು ನೀಡಿ ಫಲಾನುಭವಿಗಳಿಂದ ಅರ್ಜಿಯನ್ನು ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹಾಜಿರಾ ಗಫೂರ್, ಉಪಾಧ್ಯಕ್ಷರಾದ ಮಹೇಶ್ ಕುಮಾರ್ ಕೆ ಎಸ್, ಸದಸ್ಯರುಗಳಾದ ಲೋಕೇಶ್ ಆಕ್ರಿಕಟ್ಟೆ, ಹರೀಶ ಎಂ, ಮೀನಾಕ್ಷಿ ಕೆ, ಮೋಹಿನಿ ಎಂ, ಪವಿತ್ರಾ ಕುಧ್ವ , ಜಯಲತಾ ಕೆ.‌ಡಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಸಿ.ವಿ ಹಾಗೂ ಕಾರ್ಯದರ್ಶಿ ಗೋಪಾಲಕೃಷ್ಣ ಕೆ ಹಾಗೂ ಸಿಬ್ಬಂದಿ ವರ್ಗ, ಸಂಪನ್ಮೂಲ ವ್ಯಕ್ತಿಗಳಾದ ವಾಸುದೇವ ನಡ್ಕ, ಅಂಗನವಾಡಿ ಕಾರ್ಯಕರ್ತೆಯರು , ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು , ಗುತ್ತಿಗೆದಾರರಾದ ರವೀಶ್ ಆಕ್ರಿಕಟ್ಟೆ ಮತ್ತು ಗಣೇಶ್, ಸಂಘ ಸಂಸ್ಥೆಯ ಸದಸ್ಯರುಗಳು, ಸಂಜೀವಿನಿ ಒಕ್ಕೂಟದ ಸದಸ್ಯರು ಮತ್ತು ಊರವರು ಉಪಸ್ಥಿತರಿದ್ದರು

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ
August 30, 2026
10:38 PM
by: ದ ರೂರಲ್ ಮಿರರ್.ಕಾಂ
ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ
August 30, 2026
10:18 PM
by: ದ ರೂರಲ್ ಮಿರರ್.ಕಾಂ
ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ
August 30, 2026
10:09 PM
by: ದ ರೂರಲ್ ಮಿರರ್.ಕಾಂ
ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?
August 30, 2026
11:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror