ಅಜಾದಿ ಕಾ ಅಮೃತ ಮಹೋತ್ಸವದ ಮತ್ತು ಗಾಂಧಿ ಜಯಂತಿ ದಿನಾಚರಣೆಯನ್ನು ಕಲ್ಮಡ್ಕ ಗ್ರಾಪಂ ವತಿಯಿಂದ ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹಾಜಿರಾ ಗಫೂರ್ ದೀಪ ಬೆಳಗಿಸಿದರು, ಗ್ರಾಮ ಪಂಚಾಯತಿನ ಸ್ವಚ್ಛವಾಹಿನಿ ವಾಹನಕ್ಕೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಹೇಶ್ ಕುಮಾರ್ ಕೆ. ಎಸ್ ಇವರು ಚಾಲನೆಯನ್ನು ನೀಡಿದರು.
ಕಲ್ಮಡ್ಕ ಗ್ರಾಮ ಪಂಚಾಯತಿನ ನೂತನವಾಗಿ ನಿರ್ಮಿಸಿದ ಸ್ವಚ್ಛ ಸಂಕೀರ್ಣದ ಕಟ್ಟಡವನ್ನು ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಅಬ್ದುಲ್ ಗಫೂರ್ ರಿಬ್ಬನ್ ಕತ್ತರಿಸುವುದರ ಮೂಲಕ ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ವಾಸುದೇವ ನಡ್ಕ ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಗಾಂಧಿ ನಡಿಗೆಯ ಮೂಲಕ ಸ್ವಚ್ಛತಾ ಜಾಥಾ ಮಾಡಲಾಯಿತು ಮತ್ತು ಉದ್ಯೋಗ ಖಾತರಿ ಹೆಚ್ಚುವರಿ ಕ್ರಿಯಾಯೋಜನೆ ಮತ್ತು ಸೋಕ್ ಪಿಟ್ 100 ದಿನಗಳ ಅಭಿಯಾನಕ್ಕೆ ಚಾಲನೆಯನ್ನು ನೀಡಿ ಫಲಾನುಭವಿಗಳಿಂದ ಅರ್ಜಿಯನ್ನು ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹಾಜಿರಾ ಗಫೂರ್, ಉಪಾಧ್ಯಕ್ಷರಾದ ಮಹೇಶ್ ಕುಮಾರ್ ಕೆ ಎಸ್, ಸದಸ್ಯರುಗಳಾದ ಲೋಕೇಶ್ ಆಕ್ರಿಕಟ್ಟೆ, ಹರೀಶ ಎಂ, ಮೀನಾಕ್ಷಿ ಕೆ, ಮೋಹಿನಿ ಎಂ, ಪವಿತ್ರಾ ಕುಧ್ವ , ಜಯಲತಾ ಕೆ.ಡಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಸಿ.ವಿ ಹಾಗೂ ಕಾರ್ಯದರ್ಶಿ ಗೋಪಾಲಕೃಷ್ಣ ಕೆ ಹಾಗೂ ಸಿಬ್ಬಂದಿ ವರ್ಗ, ಸಂಪನ್ಮೂಲ ವ್ಯಕ್ತಿಗಳಾದ ವಾಸುದೇವ ನಡ್ಕ, ಅಂಗನವಾಡಿ ಕಾರ್ಯಕರ್ತೆಯರು , ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು , ಗುತ್ತಿಗೆದಾರರಾದ ರವೀಶ್ ಆಕ್ರಿಕಟ್ಟೆ ಮತ್ತು ಗಣೇಶ್, ಸಂಘ ಸಂಸ್ಥೆಯ ಸದಸ್ಯರುಗಳು, ಸಂಜೀವಿನಿ ಒಕ್ಕೂಟದ ಸದಸ್ಯರು ಮತ್ತು ಊರವರು ಉಪಸ್ಥಿತರಿದ್ದರು
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.