Advertisement

ಗಾಂಧಿ ವಿಚಾರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ | ಗ್ರಾಮೀಣ ಭಾರತವು ಗಟ್ಟಿಯಾದಾಗ ಸ್ವಾತಂತ್ರ್ಯ ಸಂಭ್ರಮ ಇಮ್ಮಡಿ |

Share

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಏರಣಗುಡ್ಡೆಯಲ್ಲಿ  ಗಾಂಧಿ ವಿಚಾರ ವೇದಿಕೆಯ ಸುಳ್ಯ ಘಟಕದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಧ್ವಜಾರೋಹಣಗೈದು  ಮಾತನಾಡಿದ ಮೊಗ್ರ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಕಾರ್ಯಪ್ಪ ಗೌಡ ಚಿಕ್ಮುಳಿ ಮಾತನಾಡಿ,”ಅನೇಕ ಹೋರಾಟಗಾರರ ಮೂಲಕ ದೇಶಕ್ಕೆ ಸ್ವಾತಂತ್ರ್ಯ ಲಭ್ಯವಾಯಿತು. ಈಗ ದೇಶದಲ್ಲಿ ಕಂಡುಬರುತ್ತಿರುವ ಭ್ರಷ್ಟಾಚಾರ ಮುಕ್ತವಾಗಬೇಕಿದೆ. ಇದಕ್ಕೆ ಹಳ್ಳಿಯಿಂದ ಹೆಜ್ಜೆ ಆರಂಭವಾಗಬೇಕಿದೆ. ಹೀಗಾಗಿ ದೇಶಭಕ್ತಿ ಒಂದು ದಿನ ಕಾಣಬೇಕಾದ್ದಲ್ಲ. ಅದು ಕಲಿಸಿ ಬರುವಂತಾದ್ದೂ ಅಲ್ಲ. ಸದಾ ನಮ್ಮಲ್ಲಿ ಇರಬೇಕಾದ್ದು ಎಂದರು.

ಮುಖ್ಯ ಅತಿಥಿಗಳಾಗಿ  ಸಾಮಾಜಿಕ ಮುಖಂಡ ಅಶೋಕ್ ನೆಕ್ರಾಜೆ ಮಾತನಾಡಿ,” ದೇಶಕ್ಕೆ ಸ್ವಾತಂತ್ರ್ಯ ಲಭ್ಯವಾಗಿದೆ. ಆದರೆ ಹಳ್ಳಿಗಳು ಇನ್ನೂ ಅಭಿವೃದ್ಧಿ ಪಥದಲ್ಲಿ  ಕಾಣಬೇಕಿದೆ. ಹೀಗಾಗಿ ಅಭಿವೃದ್ಧಿಯ ನೆಲೆಯಲ್ಲಿ ಮುಂದಿನ ಹೆಜ್ಜೆ ಬೇಕಿದೆ. ಹೀಗಾಗಿ ವೈಚಾರಿಕವಾಗಿ ಪ್ರತೀ ವ್ಯಕ್ತಿ ಬೆಳೆಯಲು ಗಾಂಧಿ ವಿಚಾರ ವೇದಿಕೆಯ ಅಗತ್ಯವಿದೆ ” ಎಂದರು.

ಕ್ರೈಸ್ತ ಅಲ್ಪಸಂಖ್ಯಾತ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಬಿಟ್ಟಿ ಬಿ. ನೆಡುನೀಲಂ ಮಾತನಾಡಿ,” ಎಲ್ಲರೂ ಜನ ಸೇವೆಗೆ ಮಹತ್ವ ಕೊಟ್ಟು ಎಲ್ಲರನ್ನೂ ಪ್ರೀತಿಯಿಂದ ಕಾಣುವಂತಾಗಬೇಕು. ಅದೇ ಗಾಂಧೀಜಿಯವರಿಗೆ ಸಲ್ಲಿಸುವ ನಿಜವಾದ ಗೌರವ” ಎಂದರು.

ಗಾಂಧಿ ವಿಚಾರ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲೆಯ ಉಪಾಧ್ಯಕ್ಷ  ಅಚ್ಚುತ ಮಲ್ಕಜೆ ಸ್ವಾಗತಿಸಿ ಗಾಂಧಿ ವಿಚಾರ ವೇದಿಕೆಯ ತಾಲೂಕು ಅಧ್ಯಕ್ಷ ಲಕ್ಷ್ಮೀಶ್ ಗಬ್ಲಡ್ಕ ಕಾರ್ಯಕ್ರಮ ನಿರೂಪಿಸಿ, ಉಜಿತ್ ಶ್ಯಾಮ್ ಚಿಕ್ಮುಳಿ ವಂದಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

12 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

15 hours ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

18 hours ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago