ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವದ ಕುರಿತಾಗಿ ರಾಜ್ಯ ಸರಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಸಾರ್ವಜನಿಕ ಗಣೇಶ ಹಬ್ಬ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ.
ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದ್ದು, ಸಾರ್ವಜನಿಕ ಗಣೇಶೋತ್ಸವ ಕೇವಲ ಮೂರು ದಿನ ಮಾತ್ರ ಅವಕಾಶ ನೀಡಲಾಗಿದೆ.
ಮೂರು ದಿನ ಮಾತ್ರ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲಾಗಿದ್ದು, ಆರ್ಕೆಸ್ಟ್ರಾ, ಸಂಗೀತ ಕಾರ್ಯಕ್ರಮಗಳಿಗೆ ಯಾವುದೇ ಅವಕಾಶ ಇರುವುದಿಲ್ಲ. ಅದೇ ರೀತಿ ಯಾವುದೇ ಮೆರವಣಿಗೆ, ಮನರಂಜನೆ ಕಾರ್ಯಕ್ರಮಗಳಿಗೆ ಅವಕಾಶ ಇರುವುದಿಲ್ಲ. ನಿಗದಿತ ಸ್ಥಳಗಳಲ್ಲಿ ಮಾತ್ರ ಗಣಪತಿ ವಿಸರ್ಜನೆಗೆ ಅವಕಾಶ ನೀಡಲಾಗಿದೆ. ಸ್ಟೇಜ್ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ. ಜಿಲ್ಲಾಡಳಿತ ಸೂಚಿಸಿದ ಸ್ಥಳದಲ್ಲೇ ಗಣೇಶ ವಿಸರ್ಜನೆ ಮಾಡಬೇಕು ಎಂದು ಗೈಡ್ ಲೈನ್ ನೀಡಲಾಗಿದೆ.
ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ವರದಿ ಆಧರಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ನಿರ್ಧಾರ ಕೈಗೊಂಡಿದ್ದು, ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ 3 ದಿನ ಮಾತ್ರ ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡಲಾಗಿದ್ದು, ಮೆರವಣಿಗೆಗೆ ಅವಕಾಶ ಇಲ್ಲ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…