ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |

February 25, 2025
8:40 PM

ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ ಪೂಜೆ ನಡೆಯಿತು. ಗಂಗಾ ಪೂಜೆ ನೆರವೇರಿಸಿದ ಮೇಯರ್ ಮನೋಜ್ ಕುಮಾರ್ ಮಾತನಾಡಿ, ನೇತ್ರಾವತಿ ನದಿಯಿಂದ  ಮಂಗಳೂರು ನಗರವಾಸಿಗಳಿಗೆ, ಕೃಷಿಗೆ ಹಾಗೂ ಇನ್ನಿತರ ಪ್ರದೇಶಗಳಿಗೆ  ನೀರು ಸರಬರಾಜು ಆಗುತ್ತಿದೆ. ನೀರಿನ ಒಳಹರಿವು ಚೆನ್ನಾಗಿದ್ದು,  ಈ ವರ್ಷದಲ್ಲಿಯೂ ಕೂಡ  ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹವಾಗಿರುವುದರಿಂದ  ಮುಂದಿನ ದಿನಗಳಲ್ಲಿ  ನೀರಿನ ಕೊರತೆಯಾಗುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಜಲಸಿರಿ ಕಾಮಗಾರಿಗಳು ನಡೆಯುತ್ತಿದ್ದು, ಕಾಮಗಾರಿಗಳು ಪೂರ್ಣಗೊಂಡರೆ ಶೀಘ್ರದಲ್ಲಿ  ಮಂಗಳೂರು ಜನತೆಗೆ  ದಿನದ 24 ಗಂಟೆ  ನೀರು ಸರಬರಾಜು ಮಾಡಲಾಗುತ್ತದೆ ಎಂದು ಅವರು ಹೇಳಿದರು.

ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಮಾತನಾಡಿ, ನೀರು ಸೀಮಿತವಾಗಿ ಸಿಗುವ ಸಂಪನ್ಮೂಲವಾಗಿದೆ.  ಮುಂದಿನ ಬರುವಂತಹ ಬೇಸಿಗೆ ಕಾಲದಲ್ಲಿ ಹಾಗೂ ನಂತರವೂ ಕೂಡ   ಮಹಾನಗರಪಾಲಿಕೆ ಸುವ್ಯವಸ್ಥಿತವಾಗಿ  ನಗರದ ಜನತೆಗೆ ಸಕಾಲದಲ್ಲಿ ನೀರು ಪೂರೈಸಲು ಇಂದು ನೇತ್ರಾವತಿ ನದಿಗೆ ಗಂಗಾಪೂಜೆ ಮಾಡಲಾಯಿತು ಹಾಗೂ ಮುಂದಿನ ದಿನಗಳಲ್ಲಿ ನೀರಿನ ಅಭಾವ ಉಂಟಾಗದಿರಲಿ ಎಂದರು.

ಉಪಮೇಯರ್ ಭಾನುಮತಿ, ವಿಪಕ್ಷ ನಾಯಕ  ಅನಿಲ್ ಕುಮಾರ್, ಪಾಲಿಕೆ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ತೆರಿಗೆ ಮತ್ತು ಹಣಕಾಸು ತಾಯಿ ಸಮಿತಿ ಅಧ್ಯಕ್ಷ  ಕದ್ರಿ ಮನೋಹರ್ ಶೆಟ್ಟಿ, ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ  ಸುಮಿತ್ರ, ಪಟ್ಟಣ ಯೋಜನೆ ಮತ್ತು ಸುಧಾರಣಾ ಸಮಿತಿ ಅಧ್ಯಕ್ಷೆ ವೀಣಾ, ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷ  ಸರಿತಾ, ಮಾಜಿ ಮೇಯರ್ ಗಳಾದ ಶಶಿಧರ ಹೆಗ್ಡೆ,  ಜಯಾನಂದ ಅಂಚನ್, ಭಾಸ್ಕರ್ ಕೆ  ಮತ್ತಿತರರು  ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror