ಪಶ್ಚಿಮ ಬಂಗಾಳದ ಸಾಗರ್ ದ್ವೀಪದಲ್ಲಿ ಜನವರಿ 8 ರಿಂದ ಜನವರಿ16 ರವರೆಗೆ ಧಾರ್ಮಿಕ ಜಾತ್ರೆ ನಡೆಯಲಿದೆ. ಮಾತ್ರವಲ್ಲದೆ ಗಂಗಾಸಾಗರ ಮೇಳದ ಸಮಯದಲ್ಲಿ ಸಾವಿರಾರು ಯಾತ್ರಿಕರು ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುವರು. ಈ ಕಾರ್ಯಕ್ರಮಕ್ಕೆ ಕೋಲ್ಕತ್ತಾ ಹೈಕೋರ್ಟ್, ಶುಕ್ರವಾರ ಕೆಲವು ಷರತ್ತುಗಳೊಂದಿಗೆ ಅನುಮತಿ ನೀಡಿದೆ.
ರಾಜ್ಯವು ಸೂಚಿಸಿದ ಕ್ರಮಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ವಿರೋಧ ಪಕ್ಷದ ನಾಯಕ, ಪಶ್ಚಿಮ ಬಂಗಾಳ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಮತ್ತು ರಾಜ್ಯದ ಪ್ರತಿನಿಧಿಯನ್ನು ಒಳಗೊಂಡ 3 ಸದಸ್ಯ ಸಮಿತಿಯ್ನು ರಚಿಸಲಾಗಿದೆ.
ದೇಶದಲ್ಲಿ ಕೋವಿಡ್ ಹರಡುವಿಕೆಯ ಕಾರಣದಿಂದ ಗಂಗಾಸಾಗರ ಮೇಳದ ಮೇಲಿನ ನಿಷೇಧವನ್ನು ಪಶ್ಚಿಮ ಬಂಗಾಳ ಸರ್ಕಾರ ಗಂಭಿರವಾಗಿ ಪರಿಗಣಿಸುತ್ತದೆ ಎಂದು ನ್ಯಾಯಾಲಯ ಹೇಳಿತ್ತು. ಕೋವಿಡ್ ವೈರಸ್ ಹರಡುವಿಕೆಯ ತೀವ್ರತೆಗೆ ಸಂಬಂಧಿಸಿದಂತೆ, ಈ ವರ್ಷ ಮೇಳವನ್ನು ನಿಷೇಧಿಸುವ ಸಾರ್ವಜನಿಕ ಹಿತಾಸಕ್ತಿ ಮನವಿಯನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದು ನ್ಯಾಯಾಲಯ ಹೇಳಿತ್ತು. ಅದಾದ ಬಳಿಕ ಷರತ್ತು ಬದ್ದ ಅನುಮತಿ ನೀಡಿತ್ತು. ಸರ್ಕಾರ ಈ ಬಗ್ಗೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತ್ತು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…