ಅಮ್ಮನಿಗೆ ಬಾಲ್ಯದಿಂದಲೇ ಓದುವ, ಬರೆಯುವ ಹವ್ಯಾಸವಿತ್ತು. ಸಭೆ-ಸಮಾರಂಭಗಳಿಗೆ ಹೋದಾಗ, ಪ್ರವಾಸಕ್ಕೆ ಹೋದಾಗ ಅವರು ನೋಡಿದ, ಕೇಳಿದ ವಿಚಾರಗಳನ್ನು ಕಲೆ ಹಾಕಿ ಸಾಕಷ್ಟು ಚಿಂತನ-ಮಥನ ಮಾಡುತ್ತಿದ್ದರು. ಧರ್ಮಸ್ಥಳದಲ್ಲಿ ಅವರ ಸೃಜನಶೀಲ ಚಿಂತನೆ ಹಾಗೂ ಕ್ರಿಯಾಶೀಲತೆಗೆ ಬೇಕಾದಷ್ಟು ವೇದಿಕೆ ಹಾಗೂ ಅವಕಾಶಗಳು ದೊರಕಿವೆ ಎಂದು ಶ್ರದ್ಧಾಅಮಿತ್ ಹೇಳಿದರು.
ಅವರು ಧರ್ಮಸ್ಥಳದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಗ್ರಾಮಾಭಿವೃದ್ಧಿಯೋಜನೆಯ ಆಶ್ರಯದಲ್ಲಿ ಆಯೋಜಿಸಿದ ವಿಚಾರ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು. ಧರ್ಮಸ್ಥಳದ ಸಿಬ್ಬಂದಿಗೆ ಅವರು ನಾಟಕ, ಯಕ್ಷಗಾನ, ಪುರಾಣವಾಚನ ಇತ್ಯಾದಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೊಸ ಪರಿಕಲ್ಪನೆಯಲ್ಲಿ ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡುತ್ತಿರುವುದರಿಂದ ಅನೇಕ ಉದಯೋನ್ಮುಖ ಕಲಾವಿದರು ಮೂಡಿ ಬಂದಿದ್ದಾರೆ ಎಂದರು. “ಗೆಳತಿ” ಮತ್ತು “ಮಗಳಿಗೊಂದು ಪತ್ರ” ಕೃತಿಗಳಲ್ಲಿ ಅವರ ಲೇಖನಗಳ ಸಂಗ್ರಹವಿದ್ದು ಸಾರ್ಥಕ ಬದುಕಿಗೆ ಮಾಹಿತಿ, ಮಾರ್ಗದರ್ಶನದ ಕಣಜವಾಗಿದೆಎಂದು ಹೇಳಿದರು.
ಬೆಂಗಳೂರಿನ ಭಾರತೀಯ ಜೀವವಿಮಾ ನಿಗಮದ ಹಿರಿಯ ಅಧಿಕಾರಿ ರಾಜ್ಯಶ್ರೀ ಹಂಪನಾ ಮಾತನಾಡಿ, ಹೇಮಾವತಿ ಹೆಗ್ಗಡೆಯವರ ನೇತೃತ್ವದಲ್ಲಿ ಗ್ರಾಮೀಣ ಮಹಿಳೆಯರ ಬದುಕಿನಲ್ಲಿ ಕ್ರಾಂತಿಕಾರಿ ಪರಿವರ್ತನೆಯಾಗಿದೆ. ಸ್ವಚ್ಛತೆ, ಕುಟುಂಬ ನಿರ್ವಹಣೆ, ಮಕ್ಕಳ ಪಾಲನೆ-ಪೋಷಣೆ, ಉಳಿತಾಯ, ಸಭೆ-ಸಮಾರಂಭ ಆಯೋಜನೆ ಮೊದಲಾದ ಚಟುವಟಿಕೆಗಳಲ್ಲಿ ಮಹಿಳೆಯರು ಉನ್ನತ ಸಾಧನೆ ಮಾಡಿ ಎಲ್ಲಾ ರಂಗಗಳಲ್ಲಿಯೂ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ.ಚಪ್ಪಲಿ ಇಡುವುದರಿಂದ ಚಪ್ಪಾಳೆ ತಟ್ಟುವ ವರೆಗೂ ಮಹಿಳೆಯರು “ಸೈ” ಎನಿಸಿಕೊಂಡಿದ್ದಾರೆ ಎಂದು ಹೇಳಿ ಅಭಿನಂದಿಸಿದರು.
ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕಿ ಸಂಗೀತಾ ಸ್ವಾಗತಿಸಿದರು. ಯೋಜನಾಧಿಕಾರಿ ಚೇತನಾ ವಂದಿಸಿದರು. ಮಮತಾ ಹರೀಶ್‍ರಾವ್ ಕಾರ್ಯಕ್ರಮ ನಿರ್ವಹಿಸಿದರು.
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್‌ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…