ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಬಡವರಿಗೆ ಉಚಿತವಾಗಿ ನೀಡುವ ಪಡಿತರ ವಿತರಣೆಯನ್ನು(Free Ration Scheme) ಮತ್ತೆ ಮೂರು ತಿಂಗಳುಗಳ ಕಾಲ ಮುಂದುವರಿಸಲು ತೀರ್ಮಾನಿಸಲಾಗಿದೆ.
ದೇಶದಲ್ಲಿ ಕೊರೊನಾ ಸಂದರ್ಭದಲ್ಲಿ ಮಾರ್ಚ್ 2020 ರಂದು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿಯಲ್ಲಿ ಅಕ್ಕಿ ವಿತರಣೆಯನ್ನು ಘೋಷಿಸಲಾಗಿದ್ದು, ಇದು ಈ ತಿಂಗಳ ಸೆಪ್ಟೆಂಬರ್ 30ಕ್ಕೆ ಅಂತ್ಯವಾಗುತ್ತಿತ್ತು. ಇದೀಗ ಈ ಯೋಜನೆಯನ್ನು ಮತ್ತೆ ಮೂರು ತಿಂಗಳುಗಳ ಕಾಲ ವಿಸ್ತರಿಸಲಾಗಿದೆ. ಇದರಿಂದಾಗಿ ದೇಶದ ಕೋಟ್ಯಾಂತರ ಬಡ ಕುಟುಂಬಗಳು ಪ್ರಯೋಜನ ಪಡೆಯಲಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಡಿ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ಒದಗಿಸಲಾಗುತ್ತದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel