ನಿಗದಿ ಪಡಿಸಿದ ವೇಳೆಯಲ್ಲಿಯೇ ಅನಿಲ ಟ್ಯಾಂಕರ್ ಸಂಚಾರ |ಅಧಿಕಾರಿಗಳ ನಿಗಾಕ್ಕೆ ಜಿಲ್ಲಾಧಿಕಾರಿ ಸೂಚನೆ |

February 14, 2022
9:47 PM

ನಿಗದಿಪಡಿಸಿರುವ (ಹಗಲು) ವೇಳೆಯಲ್ಲಿಯೇ ಅನಿಲ್ ಟ್ಯಾಂಕರುಗಳು ಸಂಚರಿಸುವ ಬಗ್ಗೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದರು.

Advertisement
Advertisement

ಅವರು ಫೆ.14ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Advertisement

ಜಿಲ್ಲೆಯನ್ನು ಹಾದುಹೋಗುವ ಹೆದ್ದಾರಿಗಳಲ್ಲಿ ಗ್ಯಾಸ್ ಟ್ಯಾಂಕರ್ ಗಳ ಅಸುರಕ್ಷಿತ ಚಾಲನೆ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತದೆ, ಅಲ್ಲದೇ ಅದು ಸಾರ್ವಜನಿಕರ ಸುಗಮ ಸಂಚಾರಕ್ಕೂ ಅನಾನುಕೂಲವಾಗುತ್ತದೆ, ಒಂದು ವೇಳೆ ಅವುಗಳು ಅಪಘಾತಕ್ಕೀಡಾದಲ್ಲಿ ಹೆಚ್ಚಿನ ಅನಾಹುತವು ಸಂಭವಿಸುತ್ತದೆ, ಈ ಕಾರಣಗಳಿಂದಾಗಿ ಗ್ಯಾಸ್ ಟ್ಯಾಂಕರ್ ಗಳ ಚಾಲನೆಗೆ ನಿಗದಿ ಪಡಿಸಿದ ಅವಧಿಯಲ್ಲಿ ಮಾತ್ರ ಅವುಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು, ಅದನ್ನು ಉಲ್ಲಂಘಿಸಿದಲ್ಲಿ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಅವರು ಎಚ್ಚರಿಸಿದರು.

ಅನಿಲ ಟ್ಯಾಂಕರ್ ಗಳು ಅಪಘಾತಕ್ಕಿಡಾದಾಗ ರಸ್ತೆಗಳು ಹೆಚ್ಚು ಕಾಲ ಬಂದ್ ಆಗಿ, ವಾಹನ ಸಂಚಾರ ತೀವ್ರ ಅಡಚಣೆಯುಂಟಾಗುತ್ತದೆ, ಹೆದ್ದಾರಿಗಳಲ್ಲಿ ವಾಹನ ದಟ್ಟಣೆ ವಿಪರೀತವಾಗುತ್ತದೆ, ಅಪಘಾತವಾದ ಸಂದರ್ಭದಲ್ಲಿ ಗ್ಯಾಸ್ ಟ್ಯಾಂಕರ್ ಗಳನ್ನು ತೆರವುಗೊಳಿಸಲು ಗ್ಯಾಸ್ ಕಂಪನಿಯ ಅಧಿಕಾರಿಗಳು ತುರ್ತಾಗಿ ಸ್ಪಂದಿಸಬೇಕು ಎಂಬ ನಿರ್ದೇಶನವನ್ನು ಅವರು ನೀಡಿದರು.

Advertisement

ಟ್ಯಾಂಕರ್ ಗಳಿಗೆ ಕಡ್ಡಾಯವಾಗಿ ಇಬ್ಬರು ಚಾಲಕರಿರಬೇಕು, ರಾತ್ರಿ ವೇಳೆಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಬಾರದು, ಒಂದು ವೇಳೆ ಟ್ಯಾಂಕರ್ ಗಳು ರಾತ್ರಿ ಸಂಚರಿಸಬೇಕಾದಲ್ಲೀ ಜಿಪಿಎಸ್‍ಅನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದರು.

 

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಹಕನಿಗೆ ಶಾಕ್‌ ಕೊಟ್ಟ ವಿದ್ಯುತ್‌ ಇಲಾಖೆ : ಬರೋಬ್ಬರಿ 17 ಕೋಟಿ ರೂ. ಕರೆಂಟ್ ಬಿಲ್ ಕಂಡು ವ್ಯಕ್ತಿ ಕಂಗಾಲು
May 15, 2024
7:50 PM
by: The Rural Mirror ಸುದ್ದಿಜಾಲ
ಮಲೆನಾಡ ಗಿಡ್ಡ ಗೋತಳಿಗಳನ್ನು ಉಳಿಸಿ ಸಂವರ್ಧಿಸಬೇಕು ಏಕೆ..?
May 15, 2024
2:29 PM
by: ಮುರಲೀಕೃಷ್ಣ ಕೆ ಜಿ
Karnataka Weather | 15-05-2024 | ಸದ್ಯ ಮಳೆ ಇದೆ | ಮೇ.21 ರಿಂದ ಮಳೆ ತೀವ್ರತೆ ಕಡಿಮೆ | ಅವಧಿಗೆ ಮುಂಗಾರು ಪ್ರಾರಂಭವಾದೀತೇ..?
May 15, 2024
11:43 AM
by: ಸಾಯಿಶೇಖರ್ ಕರಿಕಳ
ವಳಲಂಬೆಯಲ್ಲಿ ಯಕ್ಷಗಾನ | ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್ ಶೆಟ್ಟಿಯವರಿಗೆ ಗೌರವಾರ್ಪಣೆ | ಕಲಾವಿದರನ್ನು ಗೌರವಿಸುವುದು ಉತ್ತಮ ಕೆಲಸ -ಹರೀಶ್ ಬಳಂತಿಮೊಗರು |
May 14, 2024
10:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror