ನಿಗದಿಪಡಿಸಿರುವ (ಹಗಲು) ವೇಳೆಯಲ್ಲಿಯೇ ಅನಿಲ್ ಟ್ಯಾಂಕರುಗಳು ಸಂಚರಿಸುವ ಬಗ್ಗೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದರು.
ಅವರು ಫೆ.14ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯನ್ನು ಹಾದುಹೋಗುವ ಹೆದ್ದಾರಿಗಳಲ್ಲಿ ಗ್ಯಾಸ್ ಟ್ಯಾಂಕರ್ ಗಳ ಅಸುರಕ್ಷಿತ ಚಾಲನೆ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತದೆ, ಅಲ್ಲದೇ ಅದು ಸಾರ್ವಜನಿಕರ ಸುಗಮ ಸಂಚಾರಕ್ಕೂ ಅನಾನುಕೂಲವಾಗುತ್ತದೆ, ಒಂದು ವೇಳೆ ಅವುಗಳು ಅಪಘಾತಕ್ಕೀಡಾದಲ್ಲಿ ಹೆಚ್ಚಿನ ಅನಾಹುತವು ಸಂಭವಿಸುತ್ತದೆ, ಈ ಕಾರಣಗಳಿಂದಾಗಿ ಗ್ಯಾಸ್ ಟ್ಯಾಂಕರ್ ಗಳ ಚಾಲನೆಗೆ ನಿಗದಿ ಪಡಿಸಿದ ಅವಧಿಯಲ್ಲಿ ಮಾತ್ರ ಅವುಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು, ಅದನ್ನು ಉಲ್ಲಂಘಿಸಿದಲ್ಲಿ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಅವರು ಎಚ್ಚರಿಸಿದರು.
ಅನಿಲ ಟ್ಯಾಂಕರ್ ಗಳು ಅಪಘಾತಕ್ಕಿಡಾದಾಗ ರಸ್ತೆಗಳು ಹೆಚ್ಚು ಕಾಲ ಬಂದ್ ಆಗಿ, ವಾಹನ ಸಂಚಾರ ತೀವ್ರ ಅಡಚಣೆಯುಂಟಾಗುತ್ತದೆ, ಹೆದ್ದಾರಿಗಳಲ್ಲಿ ವಾಹನ ದಟ್ಟಣೆ ವಿಪರೀತವಾಗುತ್ತದೆ, ಅಪಘಾತವಾದ ಸಂದರ್ಭದಲ್ಲಿ ಗ್ಯಾಸ್ ಟ್ಯಾಂಕರ್ ಗಳನ್ನು ತೆರವುಗೊಳಿಸಲು ಗ್ಯಾಸ್ ಕಂಪನಿಯ ಅಧಿಕಾರಿಗಳು ತುರ್ತಾಗಿ ಸ್ಪಂದಿಸಬೇಕು ಎಂಬ ನಿರ್ದೇಶನವನ್ನು ಅವರು ನೀಡಿದರು.
ಟ್ಯಾಂಕರ್ ಗಳಿಗೆ ಕಡ್ಡಾಯವಾಗಿ ಇಬ್ಬರು ಚಾಲಕರಿರಬೇಕು, ರಾತ್ರಿ ವೇಳೆಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಬಾರದು, ಒಂದು ವೇಳೆ ಟ್ಯಾಂಕರ್ ಗಳು ರಾತ್ರಿ ಸಂಚರಿಸಬೇಕಾದಲ್ಲೀ ಜಿಪಿಎಸ್‍ಅನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದರು.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…