ಫೆ.27 | ಪುತ್ತೂರಿನಲ್ಲಿ ಗೋವು ಆಧಾರಿತ ಉತ್ಪನ್ನಗಳ ತಯಾರಿಕಾ ತರಬೇತಿ ಶಿಬಿರ |

February 24, 2022
1:03 PM

ಮುಳಿಯ ಗೋವಿಹಾರ ಆಶ್ರಯದಲ್ಲಿ ಹಾಗೂ ಗೋಫಲ ಟ್ರಸ್ಟ್ ನೇತೃತ್ವದಲ್ಲಿ ‘ಅರಿಯೋಣ ಬನ್ನಿ ಗೋಜನ್ಯ ಉತ್ಪನ್ನಗಳನ್ನು’  ಗೋವು ಆಧರಿತ ಉತ್ಪನ್ನಗಳ ತಯಾರಿಕಾ ಕಾರ್ಯಗಾರವು ಫೆ.27 ರಂದು ಭಾನುವಾರ ಬೆಳಗ್ಗೆ 9 ಗಂಟೆಗೆ ಪುತ್ತೂರಿನ ಕಬಕ ಸಮೀಪದ ಓಜಾಲದಲ್ಲಿರುವ ಮುಳಿಯ ಗೋವಿಹಾರದಲ್ಲಿ ನಡೆಯಲಿದೆ.

Advertisement

ಕಾರ್ಯಕ್ರಮವನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಹಾಗೂ ಗೋಫಲ ಟ್ರಸ್ಟ್ ನ ಟ್ರಸ್ಟಿ ಕೇಶವ ಪ್ರಸಾದ್ ಮುಳಿಯ ಅವರು ದೀಪೋಜ್ವಲನದ ಮೂಲಕ ಉದ್ಘಾಟಿಸಲಿದ್ದಾರೆ. ಗೋಫಲ ಟ್ರಸ್ಟ್ ನ ಅಧ್ಯಕ್ಷರಾದ ಕೊಂಕೋಡಿ ಪದ್ಮನಾಭ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಗೋವೋತ್ಪನ್ನ ತಯಾರಿಕೆ ಶಿಬಿರವು ಬೆಳಗ್ಗೆ 9ರಿಂದ ಸಂಜೆ 4 ರವರೆಗೆ ಜರುಗಲಿದೆ. ಆಸಕ್ತ ಪುರುಷರು, ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಶಿಬಿರಾರ್ಥಿಗಳು ಬರುವಾಗ ಪೆನ್ನು ಮತ್ತು ಪುಸ್ತಕ ತರುವಂತೆ ಕೋರಲಾಗಿದೆ. ಅಲ್ಲದೆ ಒಂದು ದಿನದ ಊಟ, ಉಪಾಹಾರ, ಪಾನೀಯ ಮತ್ತಿತರ ಖರ್ಚುಗಳಿಗಾಗಿ 100 ರೂ ಶುಲ್ಕ ನಿಗದಿಪಡಿಸಲಾಗಿದೆ.\

ಗೋವಿನಿಂದಾಗಿ ಮನುಷ್ಯರಿಗೆ ದಿನನಿತ್ಯ ಬಳಕೆಯಾಗುವ ದಂತಮಂಜನ್, ಸೋಪು, ದೂಪಬತ್ತಿ, ಅಮೃತ್ ಮಲಂ ಅಲ್ಲದೆ ಇತರ ಸೌಂದರ್ಯವರ್ಧಕ ಸಾಮಾಗ್ರಿಗಳು, ಕೃಷಿ ಭೂಮಿಗೆ ಬೇಕಾಗುವ ಜೀವಾಮೃತ, ಕೀಟ ನಿಯಂತ್ರಕ, ಜೀವಾಮೃತ ಔಷಧಿಗಳನ್ನು ತಯಾರಿಸುವ ವಿಧಾನವನ್ನು ಈ ಶಿಬಿರದಲ್ಲಿ ಕಲಿಸಿಕೊಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಆಸಕ್ತ ಶಿಬಿರಾರ್ಥಿಗಳು ಮುಂದೆ ನೀಡಲಾಗಿರುವ ಮೊಬೈಲ್ ಸಂಖ್ಯೆಗೆ ಗೂಗಲ್ ಪೇ ಅಥವಾ ಫೋನ್ ಪೇ ಮೂಲಕ 100 ರೂ ಶುಲ್ಕವನ್ನು ಪಾವತಿಸಿ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳುವಂತೆ ಕೋರಲಾಗಿದೆ (ಮೊಬೈಲ್ ಸಂಖ್ಯೆ : 9008928684).
ಗೋಸೇವಾ ಗತಿವಿಧಿ, ಮಂಗಳೂರು ವಿಭಾಗ ಹಾಗೂ ವಿಶ್ವ ಹಿಂದೂ ಪರಿಷತ್, ಬಜರಂಗದಳ ಪುತ್ತೂರು ಘಟಕಗಳು ಈ ಕಾರ್ಯಕ್ರವನ್ನು ಸಂಯೋಜಿಸಿವೆ.

Advertisement

ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ – ಗೋಸೇವಾ ಗತಿವಿಧಿ, ಗೋ ಉತ್ಪನ್ನ ತಯಾರಿ ಆಯಾಮ ವಿಷಯದ ಪ್ರಾಂತ ಪ್ರಮುಖರಾದ ಉಮೇಶ್ ಕುಲಕರ್ಣಿ, ಡಿ.ಸಿ. ಆರ್ ನ ನಿವೃತ್ತ ಪ್ರಧಾನ ವಿಜ್ಞಾನಿ ಡಾ. ಎಂ. ಯದುಕುಮಾರ್, ನಿವೃತ್ತ ಉಪನ್ಯಾಸಕ ಹಾಗೂ ಗೋ ಆಧಾರಿತ ಕೃಷಿಕರಾದ ಉದಯಶಂಕರ, ಗೋಉತ್ಪನ್ನಗಳ ತಯಾರಕರಾದ ಕೆ.ಟಿ ವೆಂಕಟೇಶ್, ಸ್ವರ್ಗಸಾರ ಗೋ ಉತ್ಪನ್ನಗಳ ತಯಾರಕರಾದ ಭಾಸ್ಕರ್ ರಾವ್ ಉಬರಡ್ಕ, ಹೈನುಗಾರಿಕಾ ಕೃಷಿಕರಾದ ಜಯಗುರು ಆರ್ಯ ಹಿಂದಾರು ಅವರು ಪಾಲ್ಗೊಳ್ಳಲಿದ್ದಾರೆ ಎಂದು ಮುಳಿಯ ಗೋವಿಹಾರದ ಪ್ರತಿಷ್ಠಾನದ ಅಧ್ಯಕ್ಷ ಕೃಷ್ಣನಾರಾಯಣ ಮುಳಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!
July 11, 2025
7:33 AM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ
July 11, 2025
7:22 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ
July 11, 2025
7:14 AM
by: The Rural Mirror ಸುದ್ದಿಜಾಲ
ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ
July 11, 2025
7:11 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group