Advertisement
MIRROR FOCUS

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

Share

ಘಾನಾ ಸರ್ಕಾರವು ದೇಶದ ಕೃಷಿ ಕ್ಷೇತ್ರವನ್ನು ಬಲಪಡಿಸಲು ಮತ್ತು ರೈತರ ಆದಾಯ ಹೆಚ್ಚಿಸಲು ಮರ ಬೆಳೆ ವೈವಿಧ್ಯೀಕರಣ (Tree Crop Diversification) ಯೋಜನೆಯನ್ನು ರಾಷ್ಟ್ರವ್ಯಾಪಿಯಾಗಿ ಆರಂಭಿಸಿದೆ. ಈ ಯೋಜನೆ ಮೂಲಕ ಕೋಕೋ, ಗೇರು, ತೆಂಗು ಮತ್ತು ರಬ್ಬರ್ ಬೆಳೆಗಳ ಉತ್ಪಾದನೆ ಹಾಗೂ ಮಾರುಕಟ್ಟೆ ವ್ಯವಸ್ಥೆಯನ್ನು ಸುಧಾರಿಸುವ ಗುರಿ ಹೊಂದಿದೆ.

ಆಫ್ರಿಕಾ ದೇಶದ ಘಾನಾ ತನ್ನ ಕೃಷಿ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆಗೆ ಹೆಜ್ಜೆ ಇಟ್ಟಿದ್ದು, ರಾಷ್ಟ್ರವ್ಯಾಪಿ Tree Crop Diversification Drive ಅನ್ನು ಘೋಷಿಸಿದೆ. ಈ ಮಹತ್ವಾಕಾಂಕ್ಷಿ ಯೋಜನೆಯ ಉದ್ದೇಶ ರೈತರ ಆದಾಯವನ್ನು ಹೆಚ್ಚಿಸುವುದು, ಕೃಷಿಯಲ್ಲಿ ಸ್ಥಿರತೆಯನ್ನು ತರುವುದು ಮತ್ತು ದೇಶದ ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸುವುದಾಗಿದೆ.

ಈ ಯೋಜನೆ ಮುಖ್ಯವಾಗಿ ಕೋಕೋ, ಗೇರು, ತೆಂಗು ಮತ್ತು ರಬ್ಬರ್ ಬೆಳೆಗಳ ಮೇಲೆ ಕೇಂದ್ರೀಕರಿಸಿದೆ. ಈಗಾಗಲೇ ಕೋಕೋ ಮೇಲೆ ಹೆಚ್ಚು ಅವಲಂಬಿತವಾಗಿರುವ ಘಾನಾ, ಇತರ ಮರ ಬೆಳೆಗಳತ್ತ ಗಮನ ಹರಿಸುವ ಮೂಲಕ ಕೃಷಿಯಲ್ಲಿ ವೈವಿಧ್ಯತೆ ತರುವ ಪ್ರಯತ್ನ ಮಾಡುತ್ತಿದೆ.

ಘಾನಾದ ಕೃಷಿ ಆರ್ಥಿಕತೆಯಲ್ಲಿ ಮರ ಬೆಳೆಗಳು ಪ್ರಮುಖ ಪಾತ್ರವಹಿಸುತ್ತಿವೆ. ಒಟ್ಟಾರೆ ಕೃಷಿ ರಫ್ತುಗಳಲ್ಲಿ ಸುಮಾರು 85% ಪಾಲು ಮರ ಬೆಳೆಗಳಿಂದಲೇ ಬರುತ್ತದೆ, ಇದರಲ್ಲಿ ಕೋಕೋ ಪ್ರಮುಖವಾಗಿದೆ.

 ಯೋಜನೆಯ ಪ್ರಮುಖ ಉದ್ದೇಶಗಳಲ್ಲಿ ರೈತರ ಉತ್ಪಾದಕತೆ ಹೆಚ್ಚಿಸುವುದು, ಮೌಲ್ಯವರ್ಧನೆ (Value Addition) ಉತ್ತೇಜಿಸುವುದು, ಮಾರುಕಟ್ಟೆ ಪ್ರವೇಶ ಸುಧಾರಣೆ, ಖಾಸಗಿ ವಲಯದ ಪಾತ್ರ ಬಲಪಡಿಸುವುದು, ಹವಾಮಾನ ಬದಲಾವಣೆಗೆ ಹೊಂದಿಕೊಳ್ಳುವ ಕೃಷಿ ವ್ಯವಸ್ಥೆ ನಿರ್ಮಾಣ ಮಾಡುವುದು  ಇದರ ಉದ್ದೇಶವಾಗಿದೆ.  ಈ ಯೋಜನೆಗೆ ಸುಮಾರು 227.5 ಮಿಲಿಯನ್ ಡಾಲರ್‌ (ಸುಮಾರು ₹1,800 ಕೋಟಿ) ಹೂಡಿಕೆ ಮಾಡಲಾಗಿದ್ದು, ವಿಶ್ವ ಬ್ಯಾಂಕ್ ಸಹಭಾಗಿತ್ವದಲ್ಲಿ ಜಾರಿಗೆ ತರಲಾಗುತ್ತಿದೆ.

ಹಾಗೆಯೇ, ಈ ಯೋಜನೆಯ ಮೂಲಕ ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಕಡಿಮೆ ಮಾಡಲು climate-resilient crop varieties, ಡಿಜಿಟಲ್ ಸಲಹಾ ಸೇವೆಗಳು ಮತ್ತು ತಂತ್ರಜ್ಞಾನ ಬಳಕೆಯನ್ನೂ ಉತ್ತೇಜಿಸಲಾಗುತ್ತಿದೆ.

ಏಕೆ ಈ ಯೋಜನೆ ಮಹತ್ವದ್ದು? :  ಘಾನಾದ ಕೃಷಿ ಬಹುತೇಕ ಒಂದು ಅಥವಾ ಎರಡು ಬೆಳೆಗಳ ಮೇಲೆ ಅವಲಂಬಿತವಾಗಿದ್ದು, ಇದರಿಂದ ರೈತರು ಆರ್ಥಿಕ ಅಪಾಯಕ್ಕೆ ಒಳಗಾಗುತ್ತಾರೆ. ವೈವಿಧ್ಯೀಕರಣದಿಂದ ಆದಾಯದ ಮೂಲಗಳು ಹೆಚ್ಚಾಗುತ್ತವೆ, ಬೆಳೆ ವಿಫಲವಾದರೂ ನಷ್ಟ ಕಡಿಮೆಯಾಗುತ್ತದೆ, ಗ್ರಾಮೀಣ ಉದ್ಯೋಗ ಸೃಷ್ಟಿಯಾಗುತ್ತದೆ

ರೈತರಿಗೆ ಲಾಭ ಏನು? :  ಈ ಯೋಜನೆಯಿಂದ ಉತ್ತಮ ಗುಣಮಟ್ಟದ ಬೀಜಗಳು, ತರಬೇತಿ ಮತ್ತು ತಾಂತ್ರಿಕ ಸಹಾಯ, ಮಾರುಕಟ್ಟೆ ಸಂಪರ್ಕ, ಹೆಚ್ಚಿನ ಆದಾಯದ ಅವಕಾಶ ಇವುಗಳ ಮೂಲಕ ರೈತರ ಜೀವನಮಟ್ಟದಲ್ಲಿ ಸುಧಾರಣೆ ಕಾಣುವ ನಿರೀಕ್ಷೆಯಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Ghana has launched a nationwide Tree Crop Diversification Drive to transform its agriculture sector. The project focuses on crops like cocoa, cashew, coconut, and rubber, aiming to boost farmer income, improve productivity, and enhance climate resilience. Backed by a $227.5 million investment with World Bank support, the initiative seeks to diversify agricultural output and strengthen rural livelihoods.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

1 hour ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

13 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

22 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

1 day ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago