ಭೌಗೋಳಿಕ ಸೂಚ್ಯಂಕ (GI) ಮಾನ್ಯತೆ ಪಡೆದ ರಾಜ್ಯದ ಹೆಮ್ಮೆಯ ನಂಜನಗೂಡು ರಸಬಾಳೆ, ಮೈಸೂರು ವೀಳ್ಯದೆಲೆ ಮತ್ತು ಇಂಡಿ ಲಿಂಬೆ ಹಣ್ಣುಗಳು ಮೊದಲ ಬಾರಿಗೆ ವಿಮಾನದ ಮೂಲಕ ಮಾಲ್ಡೀವ್ಸ್ ಗೆ ರಫ್ತಾಗಿವೆ. ಇದೇ 15ರಂದು ಈ ಐತಿಹಾಸಿಕ ರಫ್ತು ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗಿದ್ದು, ಇದು ಭಾರತದ ಕೃಷಿ ಉತ್ಪನ್ನಗಳ ಅಂತಾರಾಷ್ಟ್ರೀಯ ಮಾರುಕಟ್ಟೆ ವಿಸ್ತರಣೆಯಲ್ಲಿ ಹೊಸ ಮೈಲಿಗಲ್ಲು ಆಗಿದೆ.
ಈ ಮಹತ್ವದ ರಫ್ತು ಕಾರ್ಯವು ಅಪೆಡಾ ( Agricultural and Processed Food Products Export Development Authority (APEDA), ಕರ್ನಾಟಕ ಸರ್ಕಾರದ ತೋಟಗಾರಿಕೆ ಇಲಾಖೆ ಹಾಗೂ ಐಸಿಎಆರ್ ಸಂಸ್ಥೆಗಳ ಸಮನ್ವಯದೊಂದಿಗೆ ಯಶಸ್ವಿಯಾಗಿ ನೆರವೇರಿದೆ. ಮೈಸೂರು ಮತ್ತು ವಿಜಯಪುರ ಜಿಲ್ಲೆಗಳ ರೈತರಿಂದ ನೇರವಾಗಿ ಉತ್ಪನ್ನಗಳನ್ನು ಖರೀದಿಸಿ, ಜಾಗತಿಕ ಗುಣಮಟ್ಟದ ಮಾನದಂಡಗಳಿಗೆ ಅನುಗುಣವಾಗಿ ಸಂಸ್ಕರಣೆ ಹಾಗೂ ಪ್ಯಾಕೇಜಿಂಗ್ ನಡೆಸಿ ವಿಮಾನ ಮಾರ್ಗದ ಮೂಲಕ ರಫ್ತು ಮಾಡಲಾಗಿದೆ.
ಈ ರಫ್ತು ಕಾರ್ಯದಿಂದ ಜಿಐ ಮಾನ್ಯತೆ ಪಡೆದ ಸ್ಥಳೀಯ ಕೃಷಿ ಉತ್ಪನ್ನಗಳಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಮಾರುಕಟ್ಟೆ ಸಿಗುವ ಜೊತೆಗೆ, ರೈತರ ಆದಾಯ ವೃದ್ಧಿಗೂ ಸಹಕಾರಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…
ರಾಜಸ್ಥಾನದಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳನ್ನು ಉತ್ತೇಜಿಸುವ ಮೂಲಕ ರೈತರ ಭವಿಷ್ಯವನ್ನು ಸಂಪೂರ್ಣವಾಗಿ ಬದಲಾಯಿಸಬಹುದು…