Advertisement
MIRROR FOCUS

ನಂಜನಗೂಡು ರಸಬಾಳೆ ಸೇರಿ ಜಿಐ ಉತ್ಪನ್ನಗಳು ಮೊದಲ ಬಾರಿ ಮಾಲ್ಡೀವ್ಸ್‌ಗೆ

Share

ಭೌಗೋಳಿಕ ಸೂಚ್ಯಂಕ (GI) ಮಾನ್ಯತೆ ಪಡೆದ ರಾಜ್ಯದ ಹೆಮ್ಮೆಯ ನಂಜನಗೂಡು ರಸಬಾಳೆ, ಮೈಸೂರು ವೀಳ್ಯದೆಲೆ ಮತ್ತು ಇಂಡಿ ಲಿಂಬೆ ಹಣ್ಣುಗಳು ಮೊದಲ ಬಾರಿಗೆ ವಿಮಾನದ ಮೂಲಕ ಮಾಲ್ಡೀವ್ಸ್‌ ಗೆ ರಫ್ತಾಗಿವೆ. ಇದೇ 15ರಂದು ಈ ಐತಿಹಾಸಿಕ ರಫ್ತು ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗಿದ್ದು, ಇದು ಭಾರತದ ಕೃಷಿ ಉತ್ಪನ್ನಗಳ ಅಂತಾರಾಷ್ಟ್ರೀಯ ಮಾರುಕಟ್ಟೆ ವಿಸ್ತರಣೆಯಲ್ಲಿ ಹೊಸ ಮೈಲಿಗಲ್ಲು ಆಗಿದೆ.

ಈ ಮಹತ್ವದ ರಫ್ತು ಕಾರ್ಯವು ಅಪೆಡಾ ( Agricultural and Processed Food Products Export Development Authority (APEDA), ಕರ್ನಾಟಕ ಸರ್ಕಾರದ ತೋಟಗಾರಿಕೆ ಇಲಾಖೆ ಹಾಗೂ ಐಸಿಎಆರ್ ಸಂಸ್ಥೆಗಳ ಸಮನ್ವಯದೊಂದಿಗೆ ಯಶಸ್ವಿಯಾಗಿ ನೆರವೇರಿದೆ. ಮೈಸೂರು ಮತ್ತು ವಿಜಯಪುರ ಜಿಲ್ಲೆಗಳ ರೈತರಿಂದ ನೇರವಾಗಿ ಉತ್ಪನ್ನಗಳನ್ನು ಖರೀದಿಸಿ, ಜಾಗತಿಕ ಗುಣಮಟ್ಟದ ಮಾನದಂಡಗಳಿಗೆ ಅನುಗುಣವಾಗಿ ಸಂಸ್ಕರಣೆ ಹಾಗೂ ಪ್ಯಾಕೇಜಿಂಗ್‌ ನಡೆಸಿ ವಿಮಾನ ಮಾರ್ಗದ ಮೂಲಕ ರಫ್ತು ಮಾಡಲಾಗಿದೆ.

ಈ ರಫ್ತು ಕಾರ್ಯದಿಂದ ಜಿಐ ಮಾನ್ಯತೆ ಪಡೆದ ಸ್ಥಳೀಯ ಕೃಷಿ ಉತ್ಪನ್ನಗಳಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಮಾರುಕಟ್ಟೆ ಸಿಗುವ ಜೊತೆಗೆ, ರೈತರ ಆದಾಯ ವೃದ್ಧಿಗೂ ಸಹಕಾರಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

2 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

2 hours ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

13 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

18 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

18 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

19 hours ago