ಕುಮಾರಪರ್ವತ ಚಾರಣ ಪ್ರಿಯರ ಅನ್ನ ದೇವರು ಮಹಾಲಿಂಗ ಭಟ್ಟರು ಇನ್ನಿಲ್ಲ |

December 20, 2023
9:50 AM
ಬೆಟ್ಟದ ಮೇಲಿನ ಚಾರಣಿಗರ ಇಷ್ಟದ ಭಟ್ಟರು ಇನ್ನಿಲ್ಲ. ಗಿರಿಗದ್ದೆ ಮಹಾಲಿಂಹ ಭಟ್ಟರು ನಿಧನರಾದರು.

ಕುಮಾರಪರ್ವತ ಚಾರಣ ವೇಳೆ ಸಿಗುವ ಗಿರಿಗದ್ದೆ ಮಹಾಲಿಂಗ ಭಟ್ಟರನ್ನು ಚಾರಣಿಗರಿಗೆ ಪರಿಚಯಿಸಬೇಕಾದ್ದಿಲ್ಲ. ಬುಧವಾರ ಅವರು ನಿಧನಹೊಂದಿದರು.

Advertisement
Advertisement

ಕುಕ್ಕೆ ಸುಬ್ರಹ್ಮಣ್ಯದಿಂದ 4 ಕಿಲೋ ಮೀಟರ್ ದೂರದಲ್ಲಿ ಕುಮಾರಪರ್ವತದ ಹಾದಿಯ ಗಿರಿಗದ್ದೆಯಲ್ಲಿದ್ದ ಮಹಾಲಿಂಗೇಶ್ವರ ಭಟ್ಟರು ಈಚೆಗಿನವರೆಗೂ ಗಿರಿಗದ್ದೆಯಲ್ಲಿ ವಾಸವಾಗಿದ್ದರು. ಚಾರಣಿಗರ ಪಾಲಿನ ಅನ್ನದಾತ, ಅನ್ನದೇವರಾಗಿದ್ದರು. ಗಿರಿಗದ್ದೆ ಭಟ್ಟರು ಅಂತಲೇ ಫೇಮಸ್ಸು. ಕಳೆದ ಕೆಲವು ತಿಂಗಳುಗಳ ಹಿಂದೆ ಇವರ ಸಹೋದರ ವೆಂಕಟ್ರಮಣ ಜೋಯಿಸರು ಅಸೌಖ್ಯದಿಂದ  ನಿಧನ ಹೊಂದಿದ್ದರು.

ಮಹಾಲಿಂಗ ಭಟ್

 

ಈ ಕುಟುಂಬ ಗಿರಿಗದ್ದೆಗೆ ಬಂದದ್ದು 1974 ರಲ್ಲಿ. ಗಿರಿಗದ್ದೆಯಲ್ಲಿ ಮಣ್ಣಿನ ಮನೆ , ಕೊಟ್ಟಿಗೆ , ಹಟ್ಟಿ ನಿರ್ಮಿಸಿಕೊಂಡು ಏಕಾಂತ ಬದುಕು ಸಾಗಿಸಿದರು. ಅಡಿಕೆ ತೋಟ, ತರಕಾರಿ ಕೃಷಿ ಎಲ್ಲವೂ ಅವರ ಏಕಾಂತ ಬದುಕಿಗೆ ಸ್ಫೂರ್ತಿ ನೀಡಿದವು.ಆಗ ಅವರಿಗೆ ಸಾತ್ ನೀಡಿದವರು ಚಾರಣಿಗರು , ಚಾರಣಿಗರಿಗೆ ಆಶ್ರಯದಾತರಾಗಿಯೂ ಗಿರಿಗದ್ದೆ ಪರಮೇಶ್ವರ ಭಟ್ಟರು ಹೆಚ್ಚು ಆತ್ಮೀಯರಾದರು.

ಪರಮೇಶ್ವರ ಭಟ್ಟರೊಂದಿಗೆ ಅವರ ಮಕ್ಕಳೂ ಗಿರಿಗದ್ದೆ ವಾಸ ಇಷ್ಟ ಪಟ್ಟರು.ಕಾಲಾನಂತರ ಅಂದರೆ ಪರಮೇಶ್ವರ ಭಟ್ಟರಿಗೆ ವೃದ್ಧಾಪ್ಯ ಬಂದಾಗ, ಗಿರಿಗದ್ದೆ ಮನೆಯಲ್ಲಿ ಮಹಾಲಿಂಗ ಭಟ್ಟರು ಹಾಗೂ ನಾರಾಯಣ ಭಟ್ಟರು ಚಾರಣಿಗರ ಅನ್ನದಾತರಾದರು.ಮಹಾಲಿಂಗ  ಭಟ್ಟರೊಂದಿಗೆ ಅವರ ಅತ್ತೆ ಪರಮೇಶ್ವರಿ ಅಮ್ಮನೂ ಗಿರಿಗದ್ದೆ ಆಗಮಿಸಿದ್ದರು. ‌

ಅತ್ತೆ ಪರಮೇಶ್ವರಿ ಅಮ್ಮನೊಂದಿಗೆ ಮಹಾಲಿಂಗ ಭಟ್

ಗಿರಿಗದ್ದೆಗೆ ಸುಬ್ರಹ್ಮಣ್ಯಕ್ಕೆ ಪ್ರತೀ ದಿನ ಅಂದು ಬರುತ್ತಿದ್ದ ಅವರು ಸುಬ್ರಹ್ಮಣ್ಯದಿಂದ ಹೊರಡುವಾಗ 25 ಕೆಜಿ ಅಕ್ಕಿ , ಬೇಳೆ ಇತ್ಯಾದಿಗಳನ್ನು ಹೊತ್ತುಕೊಂಡು 6 ಕಿಮೀ ಬೆಟ್ಟ ಏರುತ್ತಾ ಕಾಲ್ನಡಿಗೆ ಪಯಣ. ಕುಮಾರಪರ್ವತಕ್ಕೆ ಹೋಗುವ ಚಾರಣಿಗರು , ಹೋಗುವ ವೇಳೆ ಅಥವಾ ಬರುವ ವೇಳೆ ಭಟ್ಟರ ಮನೆಯಲ್ಲಿ ಊಟ ಮಾಡಿಯೇ ಮುಂದೆ ಹೋಗುತ್ತಾರೆ. ದಿನಮುಂದಾಗಿ ಭಟ್ಟರಿಗೆ ಮಾಹಿತಿ ನೀಡಿದರೆ ಬೆಳಗ್ಗೆ ಸುಮಾರು 11 ಗಂಟೆಯ ಹೊತ್ತಿಗೆ ಅಡುಗೆ ಸಿದ್ದ.ಕೆಲವು ಚಾರಣಿಗರು ಗಿರಿಗದ್ದೆ ಮನೆಯಲ್ಲೇ ವಾಸ್ತವ್ಯ ಹೂಡಿ ಮರುದಿನ ಬೆಳಗ್ಗೆ ಕುಮಾರಪರ್ವತ ಏರುವವರೂ ಇದ್ದಾರೆ.

ಗಿರಿಗದ್ದೆ ಮನೆ

ಒಟ್ಟಿನಲ್ಲಿ ಬೆಟ್ಟದ ಮೇಲಿನ ಈ ಭಟ್ಟರ ಬದುಕು ನಿಜಕ್ಕೂ ಸಾಹಸ ಬದುಕಾಗಿತ್ತು. ನಗರದ ಸಂಪರ್ಕವಿಲ್ಲದೆ ನಗರವಾಸಿಗಳ ಸಂಪರ್ಕದೊಂದಿಗೆ ಬದುಕುವ ಇವರದು ತಪಸ್ಸಿನ ಜೀವನ ಅದಾಗಿತ್ತು. ಈಗ ಎಲ್ಲವನ್ನೂ ಬಿಟ್ಟು ಕಾಣದ ಲೋಕಕ್ಕೆ ಪಯಣಿಸಿದ್ದಾರೆ. ಚಾರಣಿಗರ ಇಷ್ಟದ ಭಟ್ಟರು ಇನ್ನಿಲ್ಲ.

ಮಹಾಲಿಂಗ ಭಟ್ಟರವರು ನಾಲ್ವರು ಮಕ್ಕಳು, ಅಪಾರ ಬಂಧು ಬಳಗ ಹಾಗೂ ಸಾವಿರಾರು ಅಭಿಮಾನಿಗಳನ್ನು ಅಗಲಿದ್ದಾರೆ.

Girigadde Mahalingeshwar Bhat, who was 6 km away from Kukke Subrahmanya, was living in the hill on the path of Kumara Parvata. He pointed out by giving food to the trekkers. A few months ago his brother Venkatramana Joisa passed away due to illness.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror