ಸಾಕ್ಷ್ಯಚಿತ್ರ ಕ್ಕೆ ರಜತ ಕಮಲ ಪ್ರಶಸ್ತಿ | ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರಿಗೆ ಮುಖ್ಯಮಂತ್ರಿಗಳಿಂದ ಸನ್ಮಾನ |

Advertisement
Advertisement

ಕರ್ನಾಟಕ ವಾರ್ತಾ ಇಲಾಖೆ ನಿರ್ಮಾಣದ, ಪಂಡಿತ್ ವೆಂಕಟೇಶ್ ಕುಮಾರ್ ಜೀವನ ಕುರಿತ ‘ನಾದದ ನವನೀತ’ ಸಾಕ್ಷ್ಯಚಿತ್ರ ಈ ಸಾಲಿನ ರಜತ ಕಮಲ ಪ್ರಶಸ್ತಿಗೆ ಭಾಜನವಾಗಿದೆ.ಈ ಹಿನ್ನೆಲೆ ಸಾಕ್ಷ್ಯಚಿತ್ರವನ್ನು ನಿರ್ದೇಶಿಸಿದ, ಖ್ಯಾತ ಚಲನಚಿತ್ರ ನಿರ್ದೇಶಕ, ಗಿರೀಶ್ ಕಾಸರವಳ್ಳಿಯವರನ್ನು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಸನ್ಮಾನಿಸಿದರು.

Advertisement

ಈ ಸಂದರ್ಭ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ, ವಾರ್ತಾ ಇಲಾಖೆ ಆಯುಕ್ತ ಡಾ.ಪಿ.ಎಸ್.ಹರ್ಷ, ಕನ್ನಡ ಚಿತ್ರ ರಂಗದ ಗಣ್ಯರೂ ಹಾಗೂ ಇತರರು ಉಪಸ್ಥಿತರಿದ್ದರು. ಸೆ.30ರಂದು ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ನಾದದ ನವನೀತ’ ಸಾಕ್ಷ್ಯಚಿತ್ರಕ್ಕೆ ಅತ್ಯುತ್ತಮ ಕಲೆ ಮತ್ತು ಸಂಸ್ಕೃತಿಯ ಚಿತ್ರವಾಗಿ ರಜತ ಕಮಲ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಸಾಕ್ಷ್ಯಚಿತ್ರ ಕ್ಕೆ ರಜತ ಕಮಲ ಪ್ರಶಸ್ತಿ | ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರಿಗೆ ಮುಖ್ಯಮಂತ್ರಿಗಳಿಂದ ಸನ್ಮಾನ |"

Leave a comment

Your email address will not be published.


*