ರಾಷ್ಟೀಯ ಗ್ರಾಮೀಣ ಜೀವನೋಪಾಯ ಮಿಷನ್ ಯೋಜನೆ(National Rural Livelihoods Mission scheme) ಅಡಿಯಲ್ಲಿ ಪಶು ಸಖಿ ಹಾಗೂ ಕೃಷಿ ಸಖಿಯರಿಗೆ(animal hostesses and agricultural sakhis) ಹೆಚ್ಚಿನ ತರಬೇತಿ(training) ನೀಡುವ ಮೂಲಕ ಕೃಷಿಯಲ್ಲಿ ಹೆಚ್ಚಿನ ಅಭಿವೃದ್ಧಿ ಸಾಧಿಸಬಹುದು ಎಂದು ಕೇಂದ್ರ ಸರ್ಕಾರದ ಉಕ್ಕು ಹಾಗೂ ಬೃಹತ್ ಕೈಗಾರಿಕಾ ಸಚಿವ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದ(Lok Sabha MP) ಎಚ್.ಡಿ. ಕುಮಾರಸ್ವಾಮಿ(H D Kumaraswami) ತಿಳಿಸಿದರು. ಜಿಲ್ಲಾ ಪಂಚಾಯತಿಯ ಕಾವೇರಿ ಸಭಾಂಗಣದಲ್ಲಿ ದಿಶಾ ಸಭೆಯ(Disha meeting) ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಹಲವಾರು ಯೋಜನೆಗಳಿದ್ದು, ಜನ ಸಾಮಾನ್ಯರು, ಬಡವರು ಅದನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ಬೇರೆ ಜಿಲ್ಲೆಗಳಿಗೆ ಹೋಲಿಸಿದಾಗ ಮಂಡ್ಯ ಜಿಲ್ಲೆಯಲ್ಲಿ ಹೆಚ್ಚಿನ ನೈಸರ್ಗಿಕ ಸಂಪನ್ಮೂಲ ಇದ್ದರೂ ಅಭಿವೃದ್ಧಿಯ ಕೊರತೆ ಕಾಡುತ್ತಿದೆ ಎಂದು ವಿಷಾದಿಸಿದರು. ಜಿಲ್ಲೆಯಲ್ಲಿ ಹೆಣ್ಣುಭ್ರೂಣ ಹತ್ಯೆಯ ಪ್ರಯತ್ನವು ಕಂಡು ಬಂದಿದ್ದು, ಇನ್ನುಮುಂದೆ ಈ ರೀತಿಯ ಪ್ರಕರಣವು ಜರುಗದಂತೆ ಅಧಿಕಾರಿಗಳು ಕ್ರಮ ಕೈಗೊಂಡು ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು. ಕೆ.ಆರ್.ಎಸ್. ಜಲಾಶಯ ತುಂಬಿದ್ದು, ಕೆರೆಗಳಿಗೆ ನೀರು ತುಂಬಿಸುವ ಕೆಲಸವಾಗಬೇಕು. ಮಳವಳ್ಳಿ ಹಾಗೂ ಮದ್ದೂರು ತಾಲ್ಲೂಕಿನ ಕೊನೆಯ ಭಾಗದಲ್ಲಿ ಕೃಷಿ ಚಟುವಟಿಕೆ ನಡೆಸುನ ರೈತರಿಗೆ ನೀರು ತಲುಪುತ್ತಿಲ್ಲ. ಅಧಿಕಾರಿಗಳು ಚುರುಕಾಗಿ ಕೆಲಸ ನಿರ್ವಹಿಸಬೇಕಿದೆ ಎಂದು ಕುಮಾರಸ್ವಾಮಿ ಆದೇಶಿಸಿದರು.
ನೀರಾವರಿ ಇಲಾಖೆಯು ಕೃಷಿಗೆ ಪೂರಕವಾಗಿ ಕೆಲಸ ನಿರ್ವಹಿಸಬೇಕು. ಹೂಳು ತೆಗೆಯುವ ಕೆಲಸ ಸರಿಯಾದ ಸಮಯಕ್ಕೆ ನಿರ್ವಹಿಸಬೇಕು. ತಾಂತ್ರಿಕ ಕಾರಣಗಳನ್ನು ತಿಳಿಸಿ ಅಚ್ಚುಕಟ್ಟು ಕಡೆಯ ಭಾಗಕ್ಕೆ ನೀರು ತಲುಪುತ್ತಿಲ್ಲ ಎಂದು ಹೇಳಿದರೆ, ರೈತರು ಒಪ್ಪುವುದಿಲ್ಲ. ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿ ಎಂದು ತಾಕೀತು ಮಾಡಿದರು. ಮಂಡ್ಯ ಜಿಲ್ಲಾ ಕೇಂದ್ರದಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರ ತೆರೆಯಲು ಸ್ಥಳ ಗುರುತಿಸಲಾಗಿದ್ದು, ಕಟ್ಟಡ ನಿರ್ಮಾಣ ಕುರಿತಂತೆ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು. ರೈತರು ಆರ್ಥಿಕವಾಗಿ ಸುಭದ್ರರಾದರೆ ಆತ್ಮಹತ್ಯೆಯಂತಹ ಪ್ರಕರಣಗಳು ಇರುವುದಿಲ್ಲ. ಇದಕ್ಕಾಗಿ ಕೃಷಿ ಇಲಾಖೆ ರೈತರೊಂದಿಗೆ ಸದಾ ಸಂಪರ್ಕದಲ್ಲಿದ್ದು,ಬೆಳೆ ಪದ್ಧತಿಗಳ ಬದಲಾವಣೆ ಸೇರಿದಂತೆ ಸರ್ಕಾರ ರೂಪಿಸುವ ಯೋಜನೆಗಳನ್ನು ಸಮಪರ್ಕವಾಗಿ ರೈತರಿಗೆ ತಲುಪಿಸಿ ಎಂದು ಹೇಳಿದರು.
ಮಹಿಳಾ ಸಂಘಗಳು ಹಾಗೂ ಯುವಕರಿಗೆ ಸ್ವ ಉದ್ಯೋಗ ಕೈಗೊಳ್ಳುವ ತರಬೇತಿಗಳನ್ನು ಹೆಚ್ಚು ಆಯೋಜಿಸಿ. ವಿವಿಧ ಯೋಜನೆಗಳಡಿ ನೀಡುವ ಸಬ್ಸಿಡಿಗಳ ಬಗ್ಗೆ ಮಾಹಿತಿ ನೀಡಿ. ಗ್ರಾಮೀಣ ಭಾಗದಲ್ಲಿ ಸುಮಾರು 20- 25 ಲಕ್ಷ ರೂ ಉದ್ದಿಮೆಯನ್ನು 10 ರಿಂದ 20 ಮಹಿಳೆಯರು ಉದ್ಯೋಗ ಪಡೆಯಬಹುದು ಎಂದರು. ಸಿ.ಎಸ್.ಆರ್. ಯೋಜನೆಯಡಿ ಪಬ್ಲಿಕ್ ಶಾಲೆಗಳ ಕಟ್ಟಡ ನಿರ್ಮಾಣಕ್ಕೆ ಯೋಜನೆ ರೂಪಿಸಿ. ಶೌಚಾಲಯಗಳು ಇಲ್ಲದ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ ಹಾಗೂ ನೀರಿನ ಸಂಪರ್ಕದೊಂದಿಗೆ ಕ್ರಿಯಾ ಯೋಜನೆ ರೂಪಿಸಿ ನೀಡುವಂತೆ ತಿಳಿಸಿದರು. ಜಿಲ್ಲೆಯಲ್ಲಿ ಹೈಟೆಕ್ ಕ್ರೀಡಾಂಗಣ ನಿರ್ಮಾಣ ಮಾಡಲು ಸ್ಥಳ ನಿಗದಿ ಪಡಿಸಿ ಯೋಜನಾ ವರದಿಯನ್ನು ನೀಡುವಂತೆ ಸೂಚಿಸಿದರು.