MIRROR FOCUS

ಪಶು ಸಖಿಯರಿಗೆ ಹೆಚ್ಚಿನ ತರಬೇತಿ ನೀಡಿ | ಕೃಷಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ | ಎಚ್.ಡಿ.ಕುಮಾರಸ್ವಾಮಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಷ್ಟೀಯ ಗ್ರಾಮೀಣ ಜೀವನೋಪಾಯ ಮಿಷನ್ ಯೋಜನೆ(National Rural Livelihoods Mission scheme) ಅಡಿಯಲ್ಲಿ ಪಶು ಸಖಿ ಹಾಗೂ ಕೃಷಿ ಸಖಿಯರಿಗೆ(animal hostesses and agricultural sakhis) ಹೆಚ್ಚಿನ ತರಬೇತಿ(training) ನೀಡುವ ಮೂಲಕ ಕೃಷಿಯಲ್ಲಿ ಹೆಚ್ಚಿನ ಅಭಿವೃದ್ಧಿ ಸಾಧಿಸಬಹುದು ಎಂದು ಕೇಂದ್ರ ಸರ್ಕಾರದ ಉಕ್ಕು ಹಾಗೂ ಬೃಹತ್ ಕೈಗಾರಿಕಾ ಸಚಿವ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದ(Lok Sabha MP) ಎಚ್.ಡಿ. ಕುಮಾರಸ್ವಾಮಿ(H D Kumaraswami) ತಿಳಿಸಿದರು. ಜಿಲ್ಲಾ ಪಂಚಾಯತಿಯ ಕಾವೇರಿ ಸಭಾಂಗಣದಲ್ಲಿ ದಿಶಾ ಸಭೆಯ(Disha meeting) ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಹಲವಾರು ಯೋಜನೆಗಳಿದ್ದು, ಜನ ಸಾಮಾನ್ಯರು, ಬಡವರು ಅದನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದರು.

Advertisement
Advertisement

ಬೇರೆ ಜಿಲ್ಲೆಗಳಿಗೆ ಹೋಲಿಸಿದಾಗ ಮಂಡ್ಯ ಜಿಲ್ಲೆಯಲ್ಲಿ ಹೆಚ್ಚಿನ ನೈಸರ್ಗಿಕ ಸಂಪನ್ಮೂಲ ಇದ್ದರೂ ಅಭಿವೃದ್ಧಿಯ ಕೊರತೆ ಕಾಡುತ್ತಿದೆ ಎಂದು ವಿಷಾದಿಸಿದರು. ಜಿಲ್ಲೆಯಲ್ಲಿ ಹೆಣ್ಣುಭ್ರೂಣ ಹತ್ಯೆಯ  ಪ್ರಯತ್ನವು ಕಂಡು ಬಂದಿದ್ದು, ಇನ್ನುಮುಂದೆ ಈ ರೀತಿಯ ಪ್ರಕರಣವು ಜರುಗದಂತೆ ಅಧಿಕಾರಿಗಳು ಕ್ರಮ ಕೈಗೊಂಡು ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.  ಕೆ.ಆರ್.ಎಸ್. ಜಲಾಶಯ ತುಂಬಿದ್ದು, ಕೆರೆಗಳಿಗೆ ನೀರು ತುಂಬಿಸುವ ಕೆಲಸವಾಗಬೇಕು. ಮಳವಳ್ಳಿ ಹಾಗೂ ಮದ್ದೂರು ತಾಲ್ಲೂಕಿನ ಕೊನೆಯ ಭಾಗದಲ್ಲಿ  ಕೃಷಿ ಚಟುವಟಿಕೆ ನಡೆಸುನ ರೈತರಿಗೆ ನೀರು ತಲುಪುತ್ತಿಲ್ಲ. ಅಧಿಕಾರಿಗಳು ಚುರುಕಾಗಿ ಕೆಲಸ ನಿರ್ವಹಿಸಬೇಕಿದೆ ಎಂದು ಕುಮಾರಸ್ವಾಮಿ ಆದೇಶಿಸಿದರು.

ನೀರಾವರಿ ಇಲಾಖೆಯು ಕೃಷಿಗೆ ಪೂರಕವಾಗಿ ಕೆಲಸ ನಿರ್ವಹಿಸಬೇಕು. ಹೂಳು ತೆಗೆಯುವ ಕೆಲಸ ಸರಿಯಾದ ಸಮಯಕ್ಕೆ ನಿರ್ವಹಿಸಬೇಕು. ತಾಂತ್ರಿಕ ಕಾರಣಗಳನ್ನು ತಿಳಿಸಿ ಅಚ್ಚುಕಟ್ಟು ಕಡೆಯ ಭಾಗಕ್ಕೆ ನೀರು ತಲುಪುತ್ತಿಲ್ಲ ಎಂದು ಹೇಳಿದರೆ, ರೈತರು ಒಪ್ಪುವುದಿಲ್ಲ. ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿ ಎಂದು ತಾಕೀತು ಮಾಡಿದರು.  ಮಂಡ್ಯ ಜಿಲ್ಲಾ ಕೇಂದ್ರದಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರ ತೆರೆಯಲು ಸ್ಥಳ ಗುರುತಿಸಲಾಗಿದ್ದು, ಕಟ್ಟಡ ನಿರ್ಮಾಣ ಕುರಿತಂತೆ ಕೇಂದ್ರ ಸರ್ಕಾರದೊಂದಿಗೆ  ಚರ್ಚಿಸಿ ಶೀಘ್ರದಲ್ಲೇ ಕಾಮಗಾರಿ  ಪ್ರಾರಂಭಿಸಲಾಗುವುದು ಎಂದರು. ರೈತರು ಆರ್ಥಿಕವಾಗಿ ಸುಭದ್ರರಾದರೆ ಆತ್ಮಹತ್ಯೆಯಂತಹ ಪ್ರಕರಣಗಳು ಇರುವುದಿಲ್ಲ.  ಇದಕ್ಕಾಗಿ ಕೃಷಿ ಇಲಾಖೆ ರೈತರೊಂದಿಗೆ ಸದಾ ಸಂಪರ್ಕದಲ್ಲಿದ್ದು,ಬೆಳೆ ಪದ್ಧತಿಗಳ ಬದಲಾವಣೆ ಸೇರಿದಂತೆ ಸರ್ಕಾರ ರೂಪಿಸುವ ಯೋಜನೆಗಳನ್ನು ಸಮಪರ್ಕವಾಗಿ ರೈತರಿಗೆ ತಲುಪಿಸಿ ಎಂದು ಹೇಳಿದರು.

ಮಹಿಳಾ ಸಂಘಗಳು ಹಾಗೂ ಯುವಕರಿಗೆ  ಸ್ವ ಉದ್ಯೋಗ ಕೈಗೊಳ್ಳುವ ತರಬೇತಿಗಳನ್ನು ಹೆಚ್ಚು ಆಯೋಜಿಸಿ. ವಿವಿಧ ಯೋಜನೆಗಳಡಿ ನೀಡುವ ಸಬ್ಸಿಡಿಗಳ ಬಗ್ಗೆ ಮಾಹಿತಿ ನೀಡಿ.  ಗ್ರಾಮೀಣ ಭಾಗದಲ್ಲಿ ಸುಮಾರು 20- 25 ಲಕ್ಷ ರೂ ಉದ್ದಿಮೆಯನ್ನು 10 ರಿಂದ 20 ಮಹಿಳೆಯರು ಉದ್ಯೋಗ ಪಡೆಯಬಹುದು ಎಂದರು.  ಸಿ.ಎಸ್.ಆರ್. ಯೋಜನೆಯಡಿ ಪಬ್ಲಿಕ್ ಶಾಲೆಗಳ ಕಟ್ಟಡ ನಿರ್ಮಾಣಕ್ಕೆ ಯೋಜನೆ ರೂಪಿಸಿ. ಶೌಚಾಲಯಗಳು ಇಲ್ಲದ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ ಹಾಗೂ ನೀರಿನ ಸಂಪರ್ಕದೊಂದಿಗೆ ಕ್ರಿಯಾ ಯೋಜನೆ ರೂಪಿಸಿ ನೀಡುವಂತೆ ತಿಳಿಸಿದರು. ಜಿಲ್ಲೆಯಲ್ಲಿ ಹೈಟೆಕ್ ಕ್ರೀಡಾಂಗಣ ನಿರ್ಮಾಣ ಮಾಡಲು ಸ್ಥಳ ನಿಗದಿ ಪಡಿಸಿ ಯೋಜನಾ ವರದಿಯನ್ನು ನೀಡುವಂತೆ  ಸೂಚಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

15 hours ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

16 hours ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

16 hours ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

17 hours ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

17 hours ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

17 hours ago