ಬೆಂಗಳೂರಿನಲ್ಲಿ ಕೃಷಿ ಮೇಳ | ಕೃಷಿ ಮೇಳದಲ್ಲಿ ವಿವಿಧ ಹೊಸ ತಳಿಗಳ ಪ್ರಾತ್ಯಕ್ಷಿಕೆ

November 16, 2024
7:28 AM

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಸಹಯೋಗದಲ್ಲಿ  ಜಿಕೆವಿಕೆ ಆವರಣದಲ್ಲಿ ಇಂದಿನಿಂದ ನ.17ರ ವರೆಗೆ ಕೃಷಿ ಮೇಳ ನಡೆಯುತ್ತಿದೆ.…..ಮುಂದೆ ಓದಿ….

Advertisement

ಕೃಷಿ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಚಿವ ಚಲುವರಾಯಸ್ವಾಮಿ, ಆಹಾರ ಉತ್ಪಾದನೆ ಹೆಚ್ಚಳದಲ್ಲಿ ಕೃಷಿ ವಿಶ್ವವಿದ್ಯಾನಿಲಯಗಳ ಸಂಶೋಧನೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿಶ್ವವಿದ್ಯಾನಿಲಯಗಳು ನಿರಂತರವಾಗಿ ಹೊಸ ತಳಿಗಳನ್ನು ಸಂಶೋಧಿಸಿ ಬಿಡುಗಡೆ ಮಾಡುತ್ತಿದ್ದು ಕಡಿಮೆ ನೀರು ಹಾಗೂ ವೆಚ್ಚದಲ್ಲಿ ಹೆಚ್ಚು ಇಳುವರಿ ಪಡೆಯಬಹುದಾಗಿದೆ ಎಂದರು.

ರಾಜ್ಯದಲ್ಲಿ ಸುಮಾರು 78 ಲಕ್ಷಕ್ಕೂ ಹೆಚ್ಚು ರೈತರು ಹಾಗೂ 125 ಲಕ್ಷಕ್ಕೂ ಹೆಚ್ಚು ಕೃಷಿ ಕಾರ್ಮಿಕರು ಕೃಷಿಯಲ್ಲಿ ತೊಡಗಿದ್ದಾರೆ. ರಾಜ್ಯ ಸರ್ಕಾರ ಕೃಷಿಗೆ ಗರಿಷ್ಠ ಆದ್ಯತೆ ನೀಡಿದೆ ಕಳೆದ ಸಾಲಿನಲ್ಲಿ ಸುಮಾರು ಒಂದು ಸಾವಿರ ಕೋಟಿ ರೂಪಾಯಿ ಸಬ್ಸಿಡಿಯೊಂದಿಗೆ ಯಂತ್ರೋಪಕರಣ, ನೀರಾವರಿ ಸಲಕರಣೆಗಳನ್ನು ವಿತರಿಸಿದೆ. 2100 ಕೋಟಿ ರೂಪಾಯಿ ಬೆಳೆವಿಮೆ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ರೈತರಿಗೆ ಭರಿಸಲಾಗಿದೆ. ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆ ರೂಪಿಸಿ ಅತ್ಯಧಿಕ ಆರ್ಥಿಕ ನೆರವಿನೊಂದಿಗೆ ಬೃಹತ್ ಬೆಳೆ ಕಟಾವು ಯಂತ್ರಗಳನ್ನು ವಿತರಿಸಲಾಗಿದೆ ಎಂದರು. ಕೃಷಿ ಪದವಿದರರು ಸ್ವಯಂ ಉದ್ಯೋಗ ಅಳವಡಿಸಿಕೊಂಡು ಇತರರಿಗೆ ಉದ್ಯೋಗ ಹಾಗೂ ಮಾರ್ಗದರ್ಶನ ನೀಡಬೇಕು ಎನ್ನುವುದು ನಮ್ಮ ಆಶಯ. ಇಂತಹ ಕೃಷಿ ಮೇಳಗಳು ನಾಡಿನ ರೈತರು ಹಾಗೂ ಕೃಷಿ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುತ್ತಿರುವುದು ಶ್ಲಾಘನೀಯ ಎಂದು ಚಲುವರಾಯಸ್ವಾಮಿ ಹೇಳಿದರು.

‘ಹವಾಮಾನ ಚತುರ ಡಿಜಿಟಲ್ ಕೃಷಿ’ ಘೋಷವಾಕ್ಯದೊಂದಿಗೆ ಆಯೋಜಿಸಲಾಗುತ್ತಿರುವ ಕೃಷಿ ಮೇಳದಲ್ಲಿ ವಿವಿಧ ಹೊಸ ತಳಿಗಳ ಪ್ರಾತ್ಯಕ್ಷಿಕೆ, ಸುಧಾರಿತ ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಕೃಷಿ ಪರಿಕರಗಳು ಹಾಗೂ ಪ್ರಕಟಣೆಗಳ ಮಾರಾಟ ಮತ್ತಿತರ ವ್ಯವಸ್ಥೆಗಳ ಮೂಲಕ ಆಧುನಿಕ ಬೇಸಾಯದ ಬಗ್ಗೆ ರೈತರಲ್ಲಿ ಅರಿವು ಮೂಡಿಸಲಾಗುತ್ತಿದೆ. ಕೃಷಿ ಮೇಳದಲ್ಲಿ ಡಿಜಿಟಲ್ ಕೃಷಿ ತಂತ್ರಜ್ಞಾನಗಳ ಬಳಕೆ, ಕೃಷಿ ಡ್ರೋಣ್, ರೋಬೋಟಿಕ್ ಕೃಷಿ ಯಂತ್ರ, ಹಣ್ಣಿನ ವರ್ಗೀಕರಣ ಯಂತ್ರ, ಸ್ವಯಂಚಾಲಿತ ರಸಗೊಬ್ಬರ ಹರಡುವ ಯಂತ್ರ, ಆಳ ನಿಯಂತ್ರಕ ರೋಟಾ-ವೇಟರ್, ಸೌರಶಕ್ತಿಚಾಲಿತ ಬರ್ಡ್ ಸ್ಕೇರರ್ ಸೇರಿದಂತೆ ಹಲವು ತಾಂತ್ರಿಕತೆಗಳನ್ನು ಪರಿಚಯಿಸಲಾಗುತ್ತಿದೆ.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕ್ಯಾಂಪ್ಕೊ ಬ್ರ್ಯಾಂಡ್ ಅಡಿಕೆ ಅಂತರಾಷ್ಟ್ರೀಯ ಮಟ್ಟಕ್ಕೆ
March 29, 2025
11:04 PM
by: ದ ರೂರಲ್ ಮಿರರ್.ಕಾಂ
ಬಂಡಿಪುರ ಅರಣ್ಯದಲ್ಲಿ ವಾಹನಗಳ ರಾತ್ರಿ ಸಂಚಾರ ನಿರ್ಬಂಧ ತೆರವಿಗೆ ಚರ್ಚಿಸಿ ನಿರ್ಧಾರ | ಅರಣ್ಯ ಸಚಿವ ಈಶ್ವರ್ ಖಂಡ್ರೆ
March 29, 2025
9:58 AM
by: The Rural Mirror ಸುದ್ದಿಜಾಲ
ಬೇಸಿಗೆ ಹಿನ್ನೆಲೆ | ರಾಜ್ಯದ ಜಲಾಶಯಗಳಿಂದ ಕುಡಿಯುವ ನೀರು ಬಿಡುಗಡೆ ಕುರಿತು ಚರ್ಚೆ
March 29, 2025
9:54 AM
by: The Rural Mirror ಸುದ್ದಿಜಾಲ
ವಿಶೇಷ ಕಾಫಿ ಉತ್ಪನ್ನಗಳ ಬಿಡುಗಡೆ | ಡಿಪ್ ಕಾಫಿ ಬ್ಯಾಗ್ ಗಳನ್ನು ಪರಿಚಯಿಸಿದ ಕಾಫಿ ಬೋರ್ಡ್
March 29, 2025
9:49 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group