ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಸಹಯೋಗದಲ್ಲಿ ಜಿಕೆವಿಕೆ ಆವರಣದಲ್ಲಿ ಇಂದಿನಿಂದ ನ.17ರ ವರೆಗೆ ಕೃಷಿ ಮೇಳ ನಡೆಯುತ್ತಿದೆ.…..ಮುಂದೆ ಓದಿ….
ಕೃಷಿ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಚಿವ ಚಲುವರಾಯಸ್ವಾಮಿ, ಆಹಾರ ಉತ್ಪಾದನೆ ಹೆಚ್ಚಳದಲ್ಲಿ ಕೃಷಿ ವಿಶ್ವವಿದ್ಯಾನಿಲಯಗಳ ಸಂಶೋಧನೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿಶ್ವವಿದ್ಯಾನಿಲಯಗಳು ನಿರಂತರವಾಗಿ ಹೊಸ ತಳಿಗಳನ್ನು ಸಂಶೋಧಿಸಿ ಬಿಡುಗಡೆ ಮಾಡುತ್ತಿದ್ದು ಕಡಿಮೆ ನೀರು ಹಾಗೂ ವೆಚ್ಚದಲ್ಲಿ ಹೆಚ್ಚು ಇಳುವರಿ ಪಡೆಯಬಹುದಾಗಿದೆ ಎಂದರು.
ರಾಜ್ಯದಲ್ಲಿ ಸುಮಾರು 78 ಲಕ್ಷಕ್ಕೂ ಹೆಚ್ಚು ರೈತರು ಹಾಗೂ 125 ಲಕ್ಷಕ್ಕೂ ಹೆಚ್ಚು ಕೃಷಿ ಕಾರ್ಮಿಕರು ಕೃಷಿಯಲ್ಲಿ ತೊಡಗಿದ್ದಾರೆ. ರಾಜ್ಯ ಸರ್ಕಾರ ಕೃಷಿಗೆ ಗರಿಷ್ಠ ಆದ್ಯತೆ ನೀಡಿದೆ ಕಳೆದ ಸಾಲಿನಲ್ಲಿ ಸುಮಾರು ಒಂದು ಸಾವಿರ ಕೋಟಿ ರೂಪಾಯಿ ಸಬ್ಸಿಡಿಯೊಂದಿಗೆ ಯಂತ್ರೋಪಕರಣ, ನೀರಾವರಿ ಸಲಕರಣೆಗಳನ್ನು ವಿತರಿಸಿದೆ. 2100 ಕೋಟಿ ರೂಪಾಯಿ ಬೆಳೆವಿಮೆ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ರೈತರಿಗೆ ಭರಿಸಲಾಗಿದೆ. ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆ ರೂಪಿಸಿ ಅತ್ಯಧಿಕ ಆರ್ಥಿಕ ನೆರವಿನೊಂದಿಗೆ ಬೃಹತ್ ಬೆಳೆ ಕಟಾವು ಯಂತ್ರಗಳನ್ನು ವಿತರಿಸಲಾಗಿದೆ ಎಂದರು. ಕೃಷಿ ಪದವಿದರರು ಸ್ವಯಂ ಉದ್ಯೋಗ ಅಳವಡಿಸಿಕೊಂಡು ಇತರರಿಗೆ ಉದ್ಯೋಗ ಹಾಗೂ ಮಾರ್ಗದರ್ಶನ ನೀಡಬೇಕು ಎನ್ನುವುದು ನಮ್ಮ ಆಶಯ. ಇಂತಹ ಕೃಷಿ ಮೇಳಗಳು ನಾಡಿನ ರೈತರು ಹಾಗೂ ಕೃಷಿ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುತ್ತಿರುವುದು ಶ್ಲಾಘನೀಯ ಎಂದು ಚಲುವರಾಯಸ್ವಾಮಿ ಹೇಳಿದರು.
‘ಹವಾಮಾನ ಚತುರ ಡಿಜಿಟಲ್ ಕೃಷಿ’ ಘೋಷವಾಕ್ಯದೊಂದಿಗೆ ಆಯೋಜಿಸಲಾಗುತ್ತಿರುವ ಕೃಷಿ ಮೇಳದಲ್ಲಿ ವಿವಿಧ ಹೊಸ ತಳಿಗಳ ಪ್ರಾತ್ಯಕ್ಷಿಕೆ, ಸುಧಾರಿತ ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಕೃಷಿ ಪರಿಕರಗಳು ಹಾಗೂ ಪ್ರಕಟಣೆಗಳ ಮಾರಾಟ ಮತ್ತಿತರ ವ್ಯವಸ್ಥೆಗಳ ಮೂಲಕ ಆಧುನಿಕ ಬೇಸಾಯದ ಬಗ್ಗೆ ರೈತರಲ್ಲಿ ಅರಿವು ಮೂಡಿಸಲಾಗುತ್ತಿದೆ. ಕೃಷಿ ಮೇಳದಲ್ಲಿ ಡಿಜಿಟಲ್ ಕೃಷಿ ತಂತ್ರಜ್ಞಾನಗಳ ಬಳಕೆ, ಕೃಷಿ ಡ್ರೋಣ್, ರೋಬೋಟಿಕ್ ಕೃಷಿ ಯಂತ್ರ, ಹಣ್ಣಿನ ವರ್ಗೀಕರಣ ಯಂತ್ರ, ಸ್ವಯಂಚಾಲಿತ ರಸಗೊಬ್ಬರ ಹರಡುವ ಯಂತ್ರ, ಆಳ ನಿಯಂತ್ರಕ ರೋಟಾ-ವೇಟರ್, ಸೌರಶಕ್ತಿಚಾಲಿತ ಬರ್ಡ್ ಸ್ಕೇರರ್ ಸೇರಿದಂತೆ ಹಲವು ತಾಂತ್ರಿಕತೆಗಳನ್ನು ಪರಿಚಯಿಸಲಾಗುತ್ತಿದೆ.
ನವೆಂಬರ್ 18 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ತಂಡವು 53 ಲಾರಿಗಳಿಂದ 10,855 ಚೀಲಗಳ ಕಳ್ಳಸಾಗಾಣಿಕೆಯ ಅಡಿಕೆಯನ್ನು…
ಜೈವಿಕ ಇಂಧನ ಕ್ಷೇತ್ರದಲ್ಲಿ ಭಾರತ ಗಮನಾರ್ಹ ಪ್ರಗತಿ ಸಾಧಿಸುತ್ತಿದೆ. ಇಂಧನ ಸುಸ್ಥಿರತೆ ಮತ್ತು…
ಜೀವನಶೈಲಿ ಬದಲಾವಣೆ ಮೂಲಕ ಮಧುಮೇಹ ನಿಯಂತ್ರಿಸಬಹುದು ಎಂದು ಸಿಮ್ಸ್ ನಿರ್ದೇಶಕ ಡಾ. ವಿರುಪಾಕ್ಷಪ್ಪ…
ಬ್ಯಾಟರಿ ಚಾಲಿತ ವಾಹನಗಳು, ಹಸಿರು ಶಕ್ತಿ ಮತ್ತು ಪರಿಸರ ಸ್ನೇಹಿ ಸಾರಿಗೆಯ ಆಯ್ಕೆಯಾಗಿವೆ…
ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿಯನ್ನು ಡಿಸೆಂಬರ್ 18 ರವರೆಗೆ ವಿಸ್ತರಣೆ ಮಾಡಲಾಗಿದೆ…