`ಜಾಗತಿಕ ಸಿರಿಧಾನ್ಯ ಸಮಾವೇಶ’ : ಆಹಾರ ಭದ್ರತೆ ಸವಾಲು ಎದುರಿಸಲು ಸಿರಿಧಾನ್ಯ ನೆರವಾಗಬಹುದು – ಪ್ರಧಾನಿ ಮೋದಿ

Advertisement

ಆಹಾರ ಭದ್ರತೆಗೆ ಸಂಬಂಧಿಸಿದ ಮತ್ತು ಆಹಾರ ಪದ್ಧತಿಗೆ ಸಂಬಂಧಿಸಿದ ಸವಾಲುಗಳನ್ನು ಎದುರಿಸುವಲ್ಲಿ ಸಿರಿಧಾನ್ಯಗಳು ನೆರವಾಗಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು. ದೆಹಲಿಯಲ್ಲಿ 2 ದಿನಗಳ ಕಾಲ ನಡೆಲಿರುವ ‘ಜಾಗತಿಕ ಸಿರಿಧಾನ್ಯ (ಶ್ರೀ ಅನ್ನ) ಸಮಾವೇಶ’ ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರೀಯ ಆಹಾರಗಳ ಪಟ್ಟಿಯಲ್ಲಿ ಪೌಷ್ಟಿಕಾಂಶಯುಕ್ತ ಧಾನ್ಯಗಳ ಪಾಲನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಕೃಷಿ ವಿಜ್ಞಾನಿಗಳಿಗೆ ಮನವಿ ಮಾಡಿದರು. ಭಾರತದ ಪ್ರಸ್ತಾವನೆ ಮತ್ತು ಪ್ರಯತ್ನಗಳನ್ನು ಮನ್ನಿಸಿರುವ ವಿಶ್ವಸಂಸ್ಥೆಯು 2023ನೇ ವರ್ಷವನ್ನು ‘ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷ’ ಎಂದು ಘೋಷಣೆ ಮಾಡಿದೆ. ಇದು ದೇಶಕ್ಕೆ ಗೌರವದ ವಿಷಯವಾಗಿದೆ. ಭಾರತವು ಸಿರಿಧಾನ್ಯ ಅಥವಾ ಶ್ರೀ ಅನ್ನವನ್ನು ಜಾಗತಿಕ ಚಳವಳಿಯಾಗಿ ಮಾರ್ಪಡಿಸಿ ಉತ್ತೇಜನ ನೀಡಲು ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಮೋದಿ ಹೇಳಿದರು.

Advertisement

ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಲ್ಲಿ, ರಾಸಾಯನಿಕಗಳು ಮತ್ತು ರಸಗೊಬ್ಬರಗಳಿಲ್ಲದೆ ಸಿರಿಧಾನ್ಯಗಳನ್ನು ಸುಲಭವಾಗಿ ಬೆಳೆಯಬಹುದು. ಸಿರಿಧಾನ್ಯ ಮಿಷನ್​ನಿಂದ ದೇಶದ 2.5 ಕೋಟಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪ್ರಯೋಜನವಾಗಲಿದೆ. ಇಂದು ದೇಶದ ಆಹಾರದ ಪಟ್ಟಿಯಲ್ಲಿ ಸಿರಿಧಾನ್ಯಗಳು ಶೇ 5-6ರಷ್ಟು ಸ್ಥಾನ ಪಡೆದಿವೆ. ಈ ಪಾಲನ್ನು ಹೆಚ್ಚಿಸಲು ತ್ವರಿತವಾಗಿ ಕೆಲಸ ಮಾಡಬೇಕೆಂದು ದೇಶದ ವಿಜ್ಞಾನಿಗಳು ಮತ್ತು ಕೃಷಿ ತಜ್ಞರನ್ನು ಒತ್ತಾಯಿಸುತ್ತೇನೆ ಎಂದು ಮೋದಿ ಹೇಳಿದರು.

Advertisement
Advertisement

Advertisement

ಆಹಾರ ಸಂಸ್ಕರಣಾ ಕ್ಷೇತ್ರಕ್ಕೆ ಸರ್ಕಾರವು ಉತ್ಪಾದನೆ ಆಧಾರಿತ ಭತ್ಯೆ (ಪಿಎಲ್​ಐ) ಯೋಜನೆ ಆರಂಭಿಸಿದೆ. ಕಂಪನಿಗಳು ಇದರ ಪ್ರಯೋಜನ ಪಡೆದುಕೊಂಡು ಸಿರಿಧಾನ್ಯ ಆಧಾರಿತ ಉತ್ಪನ್ನಗಳ ಉತ್ಪಾದನೆಯನ್ನು ಹೆಚ್ಚಿಸಬೇಕು ಎಂದು ಮೋದಿ ಮನವಿ ಮಾಡಿದರು.

Advertisement

ಸಿರಿಧಾನ್ಯ ಅಥವಾ ಪೌಷ್ಟಿಕಾಂಶಯುಕ್ತ ಧಾನ್ಯಗಳ ಪ್ರಾಮುಖ್ಯತೆಯನ್ನು ಗುರುತಿಸುವುದು, ಜನರಿಗೆ ಪೌಷ್ಟಿಕ ಆಹಾರವನ್ನು ಒದಗಿಸುವುದರೊಂದಿಗೆ ದೇಶೀಯ ಮತ್ತು ಜಾಗತಿಕ ಬೇಡಿಕೆಯನ್ನು ಸೃಷ್ಟಿಸುವ ದೃಷ್ಟಿಯಿಂದ 2023 ಅನ್ನು ‘ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷ’ ಎಂದು ಘೋಷಣೆ ಮಾಡುವಂತೆ ಭಾರತವು ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿಗೆ ಪ್ರಸ್ತಾವ ಸಲ್ಲಿಸಿತ್ತು. ಈ ಪ್ರಸ್ತಾವನೆಗೆ 72 ದೇಶಗಳಿಂದ ಬೆಂಬಲ ದೊರೆತಿತ್ತು.

Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "`ಜಾಗತಿಕ ಸಿರಿಧಾನ್ಯ ಸಮಾವೇಶ’ : ಆಹಾರ ಭದ್ರತೆ ಸವಾಲು ಎದುರಿಸಲು ಸಿರಿಧಾನ್ಯ ನೆರವಾಗಬಹುದು – ಪ್ರಧಾನಿ ಮೋದಿ"

Leave a comment

Your email address will not be published.


*