ಇಂಧನ ಕ್ಷೇತ್ರದಲ್ಲಿ ದೇಶ ಸ್ವಾವಲಂಬಿಯಾಗಲು ಹಸಿರು ಜಲಜನಕ ಉತ್ಪಾದನೆ ಅತ್ಯಂತ ಅಗತ್ಯವಾಗಿದೆ ಎಂದು ಕೇಂದ್ರ ನವ ಮತ್ತು ನವೀಕೃತ ಇಂಧನ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಭಾರತದಲ್ಲಿ ಹಸಿರು ಜಲಜನಕ – 2024 ಅಂತಾರಾಷ್ಟ್ರೀಯ ಸಮಾವೇಶದಲ್ಲಿ ಅವರು, ಹಸಿರು ಜಲಜನಕ ಉತ್ಪಾದನೆಯಿಂದ ನೈಸರ್ಗಿಕ ಅನಿಲ ಆಮದು ತಗ್ಗಲಿದೆ. ಜೊತೆಗೆ 2030ರ ವೇಳೆಗೆ 25 ದಶಲಕ್ಷ ಮೆಟ್ರಿಕ್ ಟನ್ ಇಂಗಾಲ ಹೊರಸೂಸುವಿಕೆ ಪ್ರಮಾಣವನ್ನು ತಗ್ಗಿಸುವ ಗುರಿ ಸಾಧನೆಗೆ ನೆರವಾಗಲಿದೆ. 8 ಲಕ್ಷ ಕೋಟಿ ರೂಪಾಯಿ ಹೂಡಿಕೆಯಾಗುವ ನಿರೀಕ್ಷೆಯಿದ್ದು, 6 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಹೇಳಿದರು. ಭಾರತ ಸದ್ಯದಲ್ಲೇ ಹಸಿರು ಜಲಜನಕ ಉತ್ಪಾದನೆಯಲ್ಲಿ ಪ್ರಮುಖ ದೇಶವಾಗಿ ಹೊರಹೊಮ್ಮಲಿದ್ದು, ಭಾರತ ಮತ್ತು ಜಗತ್ತಿನ ಇಂಧನ ಅಗತ್ಯಗಳನ್ನು ಪೂರೈಸಲಿದೆ ಎಂದು ಹೇಳಿದರು.
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…