ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

June 13, 2026
7:41 AM
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ ದಾಟಿದ್ದು, ಭಾರತದಲ್ಲಿ RSS-4 ರಬ್ಬರ್ ಬೆಲೆ ₹265ಕ್ಕೆ ಏರಿಕೆಯಾಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆಗಳು ಐತಿಹಾಸಿಕ ಏರಿಕೆ ದಾಖಲಿಸಿದ್ದು, ಮೊದಲ ಬಾರಿಗೆ ಕೆಜಿಗೆ ₹300 ಗಡಿಯನ್ನು ದಾಟಿವೆ. ಪ್ರಮುಖ ಉತ್ಪಾದಕ ರಾಷ್ಟ್ರಗಳಲ್ಲಿ ಪೂರೈಕೆ ಕೊರತೆ, ಹವಾಮಾನ ವೈಪರೀತ್ಯ ಹಾಗೂ ಜಾಗತಿಕ ಬೇಡಿಕೆ ಹೆಚ್ಚಳದಿಂದ ರಬ್ಬರ್ ಬೆಲೆಗಳು ಗಗನಕ್ಕೇರಿವೆ.

ಭಾರತೀಯ ಮಾರುಕಟ್ಟೆಯಲ್ಲಿಯೂ ಈ ಪರಿಣಾಮ ಗೋಚರಿಸಿದೆ. RSS-4 ದರ್ಜೆಯ ಶೀಟ್ ರಬ್ಬರ್ ಬೆಲೆ ಕೆಜಿಗೆ ₹265 ಕ್ಕೆ ತಲುಪಿದೆ. ಇದು ದೇಶೀಯ ಮಾರುಕಟ್ಟೆಯಲ್ಲಿ ದಾಖಲೆಯ ಮಟ್ಟದ ಬೆಲೆಗಳಲ್ಲಿ ಒಂದಾಗಿದೆ. ರಬ್ಬರ್ ಬೆಲೆಗಳ ನಿರಂತರ ಏರಿಕೆಯಿಂದ ರಬ್ಬರ್ ಬೆಳೆಗಾರರಲ್ಲಿ ಆಶಾವಾದ ಮೂಡಿದರೆ, ಟೈರ್ ಹಾಗೂ ರಬ್ಬರ್ ಆಧಾರಿತ ಕೈಗಾರಿಕೆಗಳಿಗೆ ಉತ್ಪಾದನಾ ವೆಚ್ಚ ಹೆಚ್ಚಳದ ಸವಾಲು ಎದುರಾಗಿದೆ.

ತಜ್ಞರ ಪ್ರಕಾರ ಥೈಲ್ಯಾಂಡ್, ಇಂಡೋನೇಷ್ಯಾ ಹಾಗೂ ವಿಯೆಟ್ನಾಂ ಸೇರಿದಂತೆ ಪ್ರಮುಖ ಉತ್ಪಾದಕ ರಾಷ್ಟ್ರಗಳಲ್ಲಿ ಉತ್ಪಾದನೆ ಕುಸಿತ ಕಂಡುಬಂದಿದ್ದು, ಜಾಗತಿಕ ಪೂರೈಕೆ ಸರಪಳಿಯಲ್ಲಿ ಒತ್ತಡ ಹೆಚ್ಚಾಗಿದೆ. ಇದರ ಜೊತೆಗೆ ವಾಹನ ಉದ್ಯಮದ ಬೇಡಿಕೆ ಮತ್ತು ಕೈಗಾರಿಕಾ ಬಳಕೆ ಹೆಚ್ಚಳವೂ ಬೆಲೆ ಏರಿಕೆಗೆ ಕಾರಣವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಭಾರತದಲ್ಲಿ ಕಳೆದ ಕೆಲವು ತಿಂಗಳುಗಳಿಂದ ರಬ್ಬರ್ ಬೆಲೆಗಳು ಏರಿಕೆಯ ಹಾದಿಯಲ್ಲಿದ್ದು, ರೈತರಿಗೆ ಉತ್ತಮ ಆದಾಯ ತಂದುಕೊಡುತ್ತಿದೆ. ಆದರೆ ದೀರ್ಘಾವಧಿಯಲ್ಲಿ ಬೆಲೆ ಸ್ಥಿರತೆ ಹಾಗೂ ಉತ್ಪಾದನೆ ಹೆಚ್ಚಳದತ್ತ ಗಮನ ಹರಿಸಬೇಕಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ರಬ್ಬರ್‌ ಉತ್ಪಾದನೆ, ಇಳುವರಿ ಕೊರತೆ ಕೂಡಾ ರಬ್ಬರ್‌ ಬೆಳೆಗಾರರಿಗೆ ಈಗ ಸಮಸ್ಯೆಯಾಗಿದೆ. ಧಾರಣೆ ಇದ್ದರೂ ಕೈಗೆ ಸಿಗದ ಪರಿಸ್ಥಿತಿಯಾಗಿದೆ.

Global natural rubber prices have crossed the historic ₹300 per kg mark amid supply shortages and rising demand. In India, RSS-4 rubber prices have climbed to ₹265 per kg, benefiting growers but increasing costs for rubber-based industries.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ
ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror