Advertisement
MIRROR FOCUS

ಮಹಿಳಾ ರೈತರ ಸಬಲೀಕರಣಕ್ಕೆ ಗೋದ್ರೆಜ್–ಮಹಾರಾಷ್ಟ್ರ ಸರ್ಕಾರದ ಮಹತ್ವದ ಒಪ್ಪಂದ

Share

ದೇಶದ ಕೃಷಿ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರವನ್ನು ಬಲಪಡಿಸಲು ಮತ್ತು ಸುಸ್ಥಿರ ಕೃಷಿಯನ್ನು ಉತ್ತೇಜಿಸಲು ಗೋದ್ರೆಜ್ ಅಗ್ರೋವೆಟ್ ಲಿಮಿಟೆಡ್ (GAVL) ಮತ್ತು ಮಹಾರಾಷ್ಟ್ರ ಸರ್ಕಾರದ ರಾಜ್ಯ ಗ್ರಾಮೀಣ ಜೀವನೋಪಾಯ ಮಿಷನ್ (MSRLM–UMED) ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಈ ಸಹಭಾಗಿತ್ವದ ಮೂಲಕ ರಾಜ್ಯದ ಸಾವಿರಾರು ಮಹಿಳಾ ರೈತರ ಬದುಕಿನಲ್ಲಿ ಹೊಸ ಬದಲಾವಣೆ ತರುವ ಗುರಿ ಹೊಂದಲಾಗಿದೆ. ಈ ಒಪ್ಪಂದವು ಕೇವಲ ತರಬೇತಿಗೆ ಸೀಮಿತವಾಗಿಲ್ಲ; ಇದು ಮಹಿಳಾ ರೈತರನ್ನು ಕೃಷಿ ಉದ್ಯಮಿಗಳನ್ನಾಗಿ ಮಾಡುವ ಮತ್ತು ಅವರ ಆದಾಯವನ್ನು ದ್ವಿಗುಣಗೊಳಿಸುವ ಒಂದು ದೂರದೃಷ್ಟಿಯ ಯೋಜನೆಯಾಗಿದೆ ಎಂದು ಸರ್ಕಾರ ತಿಳಿಸಿದೆ.

ಯೋಜನೆಯ ಮುಖ್ಯಾಂಶಗಳು: ಈ ಯೋಜನೆಯು ಮೂರು ವರ್ಷಗಳ ಅವಧಿಯಲ್ಲಿರುತ್ತದೆ. ಮಹಾರಾಷ್ಟ್ರ ರಾಜ್ಯದ 9 ಪ್ರಮುಖ ಕೃಷಿ ಜಿಲ್ಲೆಗಳ ಮಹಿಳಾ ರೈತರನ್ನು ಈ ಯೋಜನೆಗೆ ಆಯ್ಕೆ ಮಾಡಿಕೊಳ್ಳಲಾಗಿದೆ. ಸುಮಾರು 5000 ಮಹಿಳೆಯರಿಗೆ ಲಾಭವಾಗುವ ನಿರೀಕ್ಷೆ ಇದೆ. ಮೊದಲ ಹಂತದಲ್ಲಿ ಹತ್ತಿ ಬೆಳೆಗಾರರಿಗೆ ತರಬೇತಿ ನೀಡಲಿದ್ದು, ಮುಂದಿನ ದಿನಗಳಲ್ಲಿ ಮೆಕ್ಕೆಜೋಳ ಬೆಳೆಗಾರರಿಗೂ ಇದನ್ನು ವಿಸ್ತರಿಸಲಾಗುವುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಈ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳ (SHG) ಸದಸ್ಯರಿಗೆ ಆಧುನಿಕ ಕೃಷಿ ಪದ್ಧತಿಗಳ ಬಗ್ಗೆ ಸಮಗ್ರ ಮಾಹಿತಿ ನೀಡಲಾಗುತ್ತದೆ. ಮುಖ್ಯವಾಗಿ ಉತ್ತಮ ಕೃಷಿ ಪದ್ಧತಿಗಳು (GAP), ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಇಳುವರಿ ಪಡೆಯುವ ತಂತ್ರಗಳು. ಸಮಗ್ರ ಕೀಟ ನಿರ್ವಹಣೆ (IPM), ರೋಗಗಳನ್ನು ಹತೋಟಿಗೆ ತರಲು ರಾಸಾಯನಿಕಗಳಿಗಿಂತ ಜೈವಿಕ ವಿಧಾನಗಳಿಗೆ ಆದ್ಯತೆ. ರೈತ ಮಹಿಳೆಯರಿಗೆ ಕೃಷಿ ಕಾರ್ಯಾಗಾರಗಳ ಜೊತೆಗೆ ಸುರಕ್ಷತಾ ಕಿಟ್‌ಗಳನ್ನು ಸಹ ವಿತರಿಸಲಾಗುತ್ತದೆ.

ಮಹಾರಾಷ್ಟ್ರ ಸರ್ಕಾರದ UMED ಸಂಸ್ಥೆಯು ಮಹಿಳಾ ರೈತರನ್ನು ಸಂಘಟಿಸುವ ಕೆಲಸ ಮಾಡಲಿದ್ದರೆ, ಗೋದ್ರೆಜ್‌ ಅಗ್ರೋವೆಟ್‌ ಸಂಸ್ಥೆಯು ತಾಂತ್ರಿಕ ಪರಿಣತಿ, ಸಂಪನ್ಮೂಲ ಮತ್ತು ಕ್ಷೇತ್ರ ಮಟ್ಟದ ಮಾರ್ಗದರ್ಶನವನ್ನು ಒದಗಿಸಲಿದೆ. ಯೋಜನೆಯ ಮೂಲಕ ಗ್ರಾಮೀಣ ಭಾಗದಲ್ಲಿ ಸುಸ್ಥಿರ ಕೃಷಿ ಮತ್ತು ಮಹಿಳಾ ನಾಯಕತ್ವಕ್ಕೆ ಹೊಸ ಚೈತನ್ಯ ಸಿಗುವ ನಿರೀಕ್ಷೆಯಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

4 seconds ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

15 hours ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

20 hours ago

ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!

ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…

20 hours ago

ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌

ಪಡಿತರ ಚೀಟಿಗೆ ಆಧಾರ್‌ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…

21 hours ago

ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ

ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…

21 hours ago