ಧನ್‌ಬಾದ್‌ನ ಟೆತುಲ್ಮರಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೃತ ವಿದ್ಯಾರ್ಥಿನಿಯ ಪೋಷಕರು ಹಾಗೂ ಸ್ಥಳೀಯರು ಶಾಲಾ ಆಡಳಿತ ಮಂಡಳಿಯ ವಿರುದ್ಧ ಪ್ರತಿಭಟನೆ ನಡೆಸಿ, ಪೊಲೀಸರು ತನಿಖೆ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಘಟನೆ ಬೆಳಕಿಗೆ ಬಂದ ಬಳಿಕ ಆರೋಪಿ ಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಜಾರ್ಖಂಡ್‌ನ ಧನ್‌ಬಾದ್ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಉತ್ತಮ್ ಮುಖರ್ಜಿ ತಿಳಿಸಿದ್ದಾರೆ.
ಈ ಕುರಿತು ಮುಖರ್ಜಿ ಟ್ವೀಟ್ ಮಾಡಿದ್ದು, ಇದು ಗಂಭೀರ ವಿಷಯವಾಗಿದ್ದು, ಶಾಲೆಯು ಸಿಬಿಎಸ್‌ಇ ಮಂಡಳಿಗೆ ಸಂಯೋಜಿತವಾಗಿಲ್ಲ. ನಾನು ಜಿಲ್ಲಾ ಶಿಕ್ಷಣ ಅಧಿಕಾರಿಗೆ ಈ ಬಗ್ಗೆ ತಿಳಿಸಿದ್ದು, ಮೃತ ವಿದ್ಯಾರ್ಥಿನಿಯ ಕುಟುಂಬವನ್ನು ಭೇಟಿ ಮಾಡಿದ್ದೇನೆ ಎಂದು ಹೇಳಿದ್ದಾರೆ.