ಗೋಕರ್ಣ ದೇಗುಲ ನಮಗೆ ಸೇವೆಯ ಸಾಧನವಷ್ಟೇ : ರಾಘವೇಶ್ವರ ಶ್ರೀ

April 20, 2021
10:39 AM

ಶ್ರೀಮಹಾಬಲೇಶ್ವರ ದೇವಸ್ಥಾನ ನಮಗೆ ಸೇವೆಯ ಸಾಧನವಾಗಿತ್ತೇ ವಿನಃ ದೇಗುಲದಿಂದ ಯಾವ ಪ್ರತಿಫಲಾಪೇಕ್ಷೆಯೂ ಇರಲಿಲ್ಲ. ಆದ್ದರಿಂದ ಸುಪ್ರೀಂಕೋರ್ಟ್ ತೀರ್ಪಿನಿಂದ ಆಘಾತ ಅಥವಾ ವ್ಯಥೆಯಾಗುವ ಪ್ರಶ್ನೆಯೇ ಇಲ್ಲ ಎಂದು ಹೊಸನಗರದ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವಭಾರತೀ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ.

Advertisement
Advertisement

ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪು ನೀಡಿ ಮಹಾಬಲೇಶ್ವರ ದೇವಾಲಯದ ನಿರ್ವಹಣೆ ಹೊಣೆಯನ್ನು ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಬಿ.ಎನ್.ಕೃಷ್ಣ ನೇತೃತ್ವದ ಸಮಿತಿಗೆ ಸುಪ್ರೀಂಕೋರ್ಟ್ ಒಪ್ಪಿಸಿದೆ. ಶ್ರೀಮಠ ಗೋಕರ್ಣ ವಿಚಾರದಲ್ಲಿ ದೇಗುಲ ಹಿತಕ್ಕಾಗಿ ಮತ್ತು ಸಮಾಜ ಹಿತಕ್ಕಾಗಿ ಕಾನೂನು ಹೋರಾಟ ಮುಂದುವರಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Advertisement

ಶ್ರೀಶಂಕರಾಚಾರ್ಯರ ಕಾಲದಿಂದಲೂ ಶ್ರೀರಾಮಚಂದ್ರಾಪುರಮಠ ಹಾಗೂ ಗೋಕರ್ಣ ಮಹಾಬಲೇಶ್ವರ ದೇವಾಲಯಕ್ಕೆ ಪಾರಂಪರಿಕ ಸಂಬಂಧವಿದ್ದು, 2008 ರಲ್ಲಿ ಶ್ರೀಮಠಕ್ಕೆ ಪುನರ್ ಹಸ್ತಾಂತರವಾದ ನಂತರ “ದೇವಹಿತ – ಭಕ್ತಹಿತ – ಸೇವಕಹಿತ” ತತ್ವದಡಿ ದೇಗುಲ ಕೈಂಕರ್ಯಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಶ್ರೀಮಠಕ್ಕೆ ಗೋಕರ್ಣ ದೇಗುಲ ಸೇವೆಯ ಸಾಧನವಾಗಿತ್ತೇ ವಿನಃ ಎಂದೂ ಇದನ್ನು ಆದಾಯದ ಮೂಲ ಎಂಬ ದೃಷ್ಟಿಯಿಂದ ಶ್ರೀಮಠ ನೋಡಿರಲಿಲ್ಲ ಎಂದು ಹೇಳಿದ್ದಾರೆ.

ನ್ಯಾಯಾಂಗದ ಬಗ್ಗೆ ಶ್ರೀಮಠಕ್ಕೆ ಸದಾ ಗೌರವ ಇದೆ. ಹಿಂದಿನಿಂದಲೂ ನ್ಯಾಯಾಲಯ ನೀಡಿದ ತೀರ್ಪನ್ನು ಶ್ರೀಮಠ ಗೌರವಿಸುತ್ತಲೇ ಬಂದಿದೆ. ಸುಪ್ರೀಂಕೋರ್ಟ್ ಇದೀಗ ನೀಡಿರುವ ಮಧ್ಯಂತರ ತೀರ್ಪಿನಲ್ಲಿ ನಿರ್ವಹಣೆ ಹೊಣೆಯನ್ನು ನ್ಯಾಯಮೂರ್ತಿಗಳ ನೇತೃತ್ವದ ಸಮಿತಿಗೆ ವಹಿಸಲಾಗಿದೆ. ಇದು ಅಂತಿಮ ತೀರ್ಪಲ್ಲ, ಕಾದುನೋಡೋಣ ಎಂದು ಹೇಳಿದ್ದಾರೆ.
2008 ರಲ್ಲಿ ಮಹಾಬಲೇಶ್ವರ ದೇವಾಲಯ ಶ್ರೀಮಠಕ್ಕೆ ಪುನಃ ಹಸ್ತಾಂತರವಾದ ನಂತರ ಶ್ರೀಕ್ಷೇತ್ರದಲ್ಲಿ ಸಮಗ್ರ ಅಭಿವೃದ್ಧಿಯ ಮಹಾಪರ್ವವೇ ನಡೆದಿದ್ದು, ನಾಲ್ಕು ವರ್ಷಗಳ ಹಿಂದೆ ದೇವಾಲಯದ ಸುವ್ಯವಸ್ಥಿತ ಆಡಳಿತ, ಸಮರ್ಥ ನಿರ್ವಹಣೆ ಹಾಗೂ ಪಾರದರ್ಶಕತೆಯನ್ನು ಪ್ರಮಾಣೀಕರಿಸುವ ಐಎಸ್‌ಓ ಪ್ರಮಾಣಪತ್ರ ಸಿಕ್ಕಿರುವುದು ಶ್ರೀಮಠದ ಮಾದರಿ ಆಡಳಿತಕ್ಕೆ ಸಾಕ್ಷಿಯಾಗಿದೆ.

Advertisement

ಹಸ್ತಾಂತರಕ್ಕೂ ಮೊದಲು ಹಾಗೂ ಹಸ್ತಾಂತರದ ನಂತರ ಅಜಗಜಾಂತರ ವ್ಯತ್ಯಾಸವನ್ನು ಗಮನಿಸಬಹುದಾಗಿದೆ . 2008 ಕ್ಕೂ ಮೊದಲು ಲೆಕ್ಕ ಪತ್ರಗಳೇ ಇಲ್ಲದ ಸ್ಥಿತಿ ಇತ್ತು ಹಾಗೂ ಮಠದ ಆಡಳಿತದಲ್ಲಿ ಪ್ರತಿ ರೂಪಾಯಿಗೂ ಆಡಿಟೆಡ್ ಲೆಕ್ಕ ಪತ್ರ ಇದೆ. ಹಿಂದೆ ಭಕ್ತರ ಸುಲಿಗೆ ನಡೆಯುತ್ತಿದ್ದ ಕ್ಷೇತ್ರದಲ್ಲಿ ಇದೀಗ ಆಗಮಿಸುವ ಎಲ್ಲ ಭಕ್ತಾದಿಗಳಿಗೆ ಎರಡು ಹೊತ್ತು ಪ್ರಸಾದ ಭೋಜನ ವ್ಯವಸ್ಥೆ ಕಲ್ಪಿಸಲಾಗಿದೆ. ಸ್ವಚ್ಛತೆ ಸೌಕರ್ಯಗಳ ಬಗ್ಗೆ ಸರ್ಕಾರ ನೇಮಕ ಮಾಡಿದ ಸಮಿತಿಯೇ ಮೆಚ್ಚುಗೆ ವ್ಯಕ್ತಪಡಿರುವುದು ಉಲ್ಲೇಖಾರ್ಹ ಎಂದು ವಿವರಿಸಿದ್ದಾರೆ. ದೇಗುಲದ ಹಿತಕ್ಕಾಗಿ, ಸಮಾಜದ ಹಿತಕ್ಕಾಗಿ ಶ್ರೀಮಠ, ಇಡೀ ಸಮಾಜದ ಜತೆಗೂಡಿ ಕಾನೂನು ಹೋರಾಟ ಮುಂದುವರಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುಪ್ರೀಂಕೋರ್ಟ್‌ ನ ಮಧ್ಯಂತರ ತೀರ್ಪನ್ನು ನಾವು ಗೌರವಿಸುತ್ತೇವೆ. ಗೋಕರ್ಣದ ಮಹಾಬಲೇಶ್ವರ ದೇವಾಲಯದಿಂದ ಹಣ – ಅಧಿಕಾರ – ಪ್ರತಿಷ್ಠೆ ಇಂಥ ಯಾವ ಪ್ರತಿಫಲಾಪೇಕ್ಷೆಯೂ ನಮಗೆ ಇರಲಿಲ್ಲ. ಇದನ್ನು ಕೇವಲ ಸೇವೆಯ ಸಾಧನವಾಗಿ ನಾವು ಪರಿಣಿಸಿದ್ದೆವು. ಪರಂಪರೆಯ ಸಂಬಂಧ ಇರುವುದರಿಂದ ಮತ್ತು ಸಮಾಜ ಹಿತಕ್ಕಾಗಿ ಶ್ರೀಮಠ ಗೋಕರ್ಣ ದೇವಾಲಯದ ಕಾನೂನು ಹೋರಾಟ ಕೈಗೆತ್ತಿಕೊಂಡಿತ್ತು. ಇದನ್ನು ಮುಂದುವರಿಸಲಿದೆ. – ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು, ಶ್ರೀ ರಾಮಚಂದ್ರಾಪುರಮ
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದಿನ 10 ದಿನಗಳ ಹವಾಮಾನ ಪರಿಸ್ಥಿತಿ ಹೇಗಾಗುತ್ತದೆ…? | ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ | ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು…?
May 17, 2024
11:32 AM
by: ದ ರೂರಲ್ ಮಿರರ್.ಕಾಂ
ಸಮಾಜಕ್ಕೆ ಸೇವೆ ಮಾಡುವುದು ಎಂದರೆ ಹಲವು ಆಯಾಮಗಳಿವೆ | ಹವಾಮಾನ ಹೇಳುವುದೂ ಒಂದು ಸೇವೆ |
May 17, 2024
11:12 AM
by: ದ ರೂರಲ್ ಮಿರರ್.ಕಾಂ
ಮುಳಿಯ ಚಿನ್ನೋತ್ಸವ | ಸ್ಪೆಷಲ್ ರುದ್ರಾಕ್ಷಿ ಕಲೆಕ್ಷನ್ ಅನಾವರಣ
May 17, 2024
10:54 AM
by: ದ ರೂರಲ್ ಮಿರರ್.ಕಾಂ
ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ
May 16, 2024
5:58 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror